ದ್ವೇಷದ ಹೇಳಿಕೆಗೆ ಸಿಗಲ್ಲ ವೀಸಾ?
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿರುವವರಿಗೆ ಆಘಾತಕಾರಿ ಸುದ್ದಿ! ಈವರೆಗೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದಾಗ ಖಾಸಗಿ ಕಂಪನಿಗಳು ಅಭ್ಯರ್ಥಿಯ ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳನ್ನು ತಡಕಾಡಿ, ವ್ಯಕ್ತಿಯ ವ್ಯಕ್ತಿತ್ವ ಅಳೆಯುತ್ತಿದ್ದವು. ಆದರೆ ಇದೀಗ ಅಮೆರಿಕ ಸೇರಿ ಹಲವು ದೇಶಗಳ ವಲಸೆ ಮತ್ತು ಗಡಿ ಭದ್ರತಾ ಅಧಿಕಾರಿಗಳು ಕೂಡ ಫೇಸ್ಬುಕ್ ಪ್ರೊಫೈಲ್ ಪರಿಶೀಲಿಸುತ್ತಿದ್ದಾರೆ. ಒಂದು ವೇಳೆ ಆ ದೇಶದ ನೀತಿಗೆ ವಿರುದ್ಧವಾದ ಹೇಳಿಕೆಗಳನ್ನು ಪೋಸ್ಟ್ ಅಥವಾ ಟ್ವೀಟ್ ಮಾಡಿದರೆ ವೀಸಾ ನಿರಾಕರಣೆ ಮಾಡಬಹುದಾಗಿದೆ. ಅಷ್ಟೇ ಅಲ್ಲ, ಅರ್ಜಿಯಲ್ಲಿನ ವಿವರಗಳು ಹೋಲಿಕೆ ಯಾಗದಿದ್ದರೆ, ಅಥವಾ ತೀವ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರೆ, ದ್ವೇಷದ ಹೇಳಿಕೆ ನೀಡಿದರೂ ವೀಸಾ ನಿರಾಕರಿಸುವ ಸಾಧ್ಯತೆಯಿದೆ. ಸಲಿಂಗಕಾಮದ ಪರ ಮಾತನಾಡಿದ್ದ ಅಮೆರಿಕ ಪಾದ್ರಿಗೆ ದಕ್ಷಿಣ ಆಫ್ರಿಕಾ ವೀಸಾ ನಿರಾಕರಿಸಲಾಗಿತ್ತು. ಅಷ್ಟೇ ಅಲ್ಲ, ಅಮೆರಿಕದ ವಲಸೆ ಅಧಿಕಾರಿಗಳು ವೀಸಾ ಅರ್ಜಿದಾರರ ಎಲೆಕ್ಟ್ರಾನಿಕ್ ಸಾಧನಗಳ ಪರಿಶೀಲಿಸುವ ವಿಶೇಷ ಅಧಿಕಾರವನ್ನೂ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!