ದುಃಸ್ವಪ್ನವಾದ ವರುಣ


Team Udayavani, Aug 15, 2018, 11:01 AM IST

x-45.jpg

ತಿರುವನಂತಪುರ/ಹೊಸದಿಲ್ಲಿ: ಎಡೆಬಿಡದೆ ಸುರಿಯುತ್ತಿರುವ ಮಳೆ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಸರಣಿ ಭೂಕುಸಿತಗಳು ಕೇರಳಿಗರಿಗೆ ದುಃಸ್ವಪ್ನವಾಗಿ ಕಾಡುತ್ತಿವೆ. ಮಂಗಳವಾರವೂ ವರುಣನ ಆರ್ಭಟ ಮುಂದುವರಿದಿದ್ದು, ವಯನಾಡ್‌, ಕಲ್ಲಿ ಕೋಟೆ, ಮಳಪ್ಪುರಂ, ಕಣ್ಣೂರು, ಕಾಸರಗೋಡಿನಲ್ಲಿ ಭೂಕುಸಿತ ಸಂಭವಿಸಿದೆ. ಈವರೆಗೆ 215 ಭೂ ಕುಸಿತಗಳು ಸಂಭವಿಸಿದ್ದು, 444 ಗ್ರಾಮಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಅಧಿಕೃತ ಓಣಂ ಆಚರಣೆಯನ್ನು ಸರಕಾರ ರದ್ದುಗೊಳಿ ಸಿದ್ದು, ಅದಕ್ಕೆಂದು ಮೀಸಲಿಟ್ಟ ಹಣವನ್ನು ಪರಿಹಾರ ಕಾರ್ಯಾಚರಣೆಗೆ ಬಳಸುವುದಾಗಿ ಸಿಎಂ ಪಿಣರಾಯಿ ವಿಜಯನ್‌ ಘೋಷಿಸಿದ್ದಾರೆ. ಬುಧವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋ ಜಿಸಬೇಕಾಗಿದ್ದ ಔತಣಕೂಟವನ್ನೂ ರಾಜ್ಯಪಾಲ ಪಿ.ಸದಾಶಿವಂ ಅವರು ರದ್ದುಗೊಳಿಸಿದ್ದಾರೆ.

ಇಡುಕ್ಕಿ ಬಳಿಕ ಮುಲ್ಲಪೆರಿಯಾರ್‌: ಇಡುಕ್ಕಿ ಜಲಾಶಯ ಸೃಷ್ಟಿಸಿದ್ದ ಆತಂಕ ಸ್ವಲ್ಪಮಟ್ಟಿಗೆ ಕಡಿಮೆಯಾಗಿರುವಾಗಲೇ ಮುಲ್ಲಪೆರಿಯಾರ್‌ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರ ಏರಿಕೆ ಕಂಡಿರುವುದು ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿದೆ. ಇಲ್ಲಿನ ಗರಿಷ್ಠ ನೀರಿನ ಮಟ್ಟ 142 ಅಡಿ ಆಗಿದ್ದು, ಈಗಾಗಲೇ 136.10 ಅಡಿ ತಲುಪಿದೆ. ಹೀಗಾಗಿ, ಎಚ್ಚರಿಕೆಯಲ್ಲಿರುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ.

ಉತ್ತರವೂ ತತ್ತರ: ಉತ್ತರ ಭಾರತದಲ್ಲೂ ಭಾರೀ ಮಳೆಯಾಗುತ್ತಿದ್ದು, ಜಮ್ಮುವಿನಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹಕ್ಕೆ ನಾಲ್ವರು ಬಲಿಯಾಗಿ  ದ್ದಾರೆ. 24ಕ್ಕೂ ಹೆಚ್ಚು ಮನೆಗಳು, ವಾಹ ನ ಗಳಿಗೆ ಹಾನಿ ಯಾಗಿವೆ. ಹಿಮಾಚಲ ಪ್ರದೇಶ ದಲ್ಲಿ 5 ವರ್ಷದ ಬಾಲಕ ನೀರಿನಲ್ಲಿ ಮುಳುಗಿದ್ದು, ಮೃತರ ಸಂಖ್ಯೆ 2 ದಿನಗಳಲ್ಲಿ 19ಕ್ಕೇರಿದೆ. ಇದೇ ವೇಳೆ, ಉತ್ತರಪ್ರದೇಶದಲ್ಲಿ ಮಳೆ ಸಂಬಂಧಿ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದಾರೆ. 

ಪೂಜೆಗೆ ಅಡ್ಡಿಯಿಲ್ಲ
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ “ನಿರಪುಥಾರಿ’ ಪೂಜೆಯು ನಿಗದಿಯಂತೆ ನಡೆಯಲಿದ್ದು, ಸುಗಮವಾಗಿ ಸಾಗಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿದೆ. ಬುಧವಾರ ಬೆಳಗ್ಗೆ ಈ ಪೂಜೆ ನಡೆಯಲಿದೆ. ಪಂಪಾ ನದಿ ಅಪಾಯದ ಮಟ್ಟದಲ್ಲಿ ಹರಿಯು ತ್ತಿರುವ ಕಾರಣ ಸದ್ಯಕ್ಕೆ ದೇವಸ್ಥಾನದ ಕಡೆಗೆ ಬರಬೇಡಿ ಎಂದು ಅಯ್ಯಪ್ಪ ಭಕ್ತರಿಗೆ ಸೋಮ ವಾರವಷ್ಟೇ ಟಿಡಿಬಿ ಸಲಹೆ ನೀಡಿತ್ತು. ಆದರೂ, ಈ ವಿಚಾರ ಅರಿವಿಲ್ಲದೇ ದೇಗುಲ ತಲುಪಿರುವ ಭಕ್ತರಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದೂ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.