ಡಿಸೆಂಬರ್ನಲ್ಲೇ ಲೋಕ ಚುನಾವಣೆ?
Team Udayavani, Aug 16, 2018, 6:00 AM IST
ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆಯನ್ನು ಒಟ್ಟಿಗೆ ನಡೆಸುವುದಕ್ಕೆ ಸಂಬಂಧಿಸಿದ ಚರ್ಚೆ ತೀವ್ರಗೊಂಡಿರುವಾಗಲೇ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ಜತೆಗೇ ನಡೆಸಬಹುದು ಎಂದಿದ್ದಾರೆ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್. ಮಿಜೋರಾಂ, ಛತ್ತೀಸ್ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ವಿಧಾನಸಭೆ ಅವಧಿ ಡಿಸೆಂಬರ್-ಜನವರಿಯಲ್ಲಿ, ಲೋಕಸಭೆ ಅವಧಿಯು 2019ರ ಮೇಯಲ್ಲಿ ಮುಕ್ತಾಯವಾಗಲಿದೆ. ಲೋಕಸಭೆ ಚುನಾವಣೆಯನ್ನು ನವೆಂಬರ್-ಡಿಸೆಂಬರ್ನಲ್ಲಿ ನಡೆಸಲು ನಿರ್ಧರಿಸಿದರೆ, ಈ ನಾಲ್ಕು ರಾಜ್ಯಗಳ ಚುನಾವಣೆಯೊಂದಿಗೇ ಮಾಡಬಹುದೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾವತ್, ಖಂಡಿತವಾಗಿಯೂ ಮಾಡಬಹುದು. ಇದರಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ. ಈ ಸಂಬಂಧ ರೂಪುರೇಷೆಯನ್ನು ಕಾನೂನು ಸಮಿತಿ ಶೀಘ್ರ ಮಂಡಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು