ಬಿಹಾರ:ಮಹಿಳೆಯ ನಗ್ನ ಗೊಳಿಸಿ ಬೀದಿಯಲ್ಲಿ ಮೆರವಣಿಗೆ; ಹಿಂಸಾಚಾರ
Team Udayavani, Aug 21, 2018, 12:22 PM IST
ಭೋಜ್ಪುರ್ : ಇಲ್ಲಿನ ಬಿಹಿಯಾ ಎಂಬಲ್ಲಿ ಮನುಕುಲವೇ ಹೇಯ ಪಡುವಂತಹ ಕೃತ್ಯದಲ್ಲಿ,19 ವರ್ಷದ ಯುವಕ ನೊಬ್ಬನ ಕೊಲೆ ಮಾಡಿದ್ದಾಳೆ ಎನ್ನುವ ಶಂಕೆಯಲ್ಲಿ ಮಹಿಳೆಯೊಬ್ಬಳನ್ನು ನಗ್ನ ಗೊಳಿಸಿ ಅಮಾನವೀಯವಾಗಿ ಥಳಿಸಿರುವ ಘಟನೆ ಸೋಮವಾರ ನಡೆದಿದೆ.
ಲೈಂಗಿಕ ಕಾರ್ಯಕರ್ತೆಯರು ಹೆಚ್ಚಾಗಿರುವ ಪ್ರದೇಶದಲ್ಲಿ ರೈಲ್ವೇ ನಿಲ್ದಾಣದ ಬಳಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಾಲಕನ ಶವ ಪತ್ತೆಯಾದ ಬಳಿಕ ಹಿಂಸಾಚಾರ ಭುಗಿಲೆದ್ದಿದ್ದು ಕಂಡ ಕಂಡ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದ್ದು , ಪ್ರಯಾಣಿಕರ ರೈಲುಗಳಿಗೂ ಕಲ್ಲು ತೂರಾಟ ನಡೆಸಲಾಗಿದೆ.
ಭಾನುವಾರ ಯುವಕ ಮಹಿಳೆಯೊಂದಿಗೆ ಇದ್ದ ಎನ್ನಲಾಗಿದ್ದು, ಸೋಮವಾರ ಶವವಾಗಿ ಪತ್ತೆಯಾಗಿದ್ದ.ಯುವಕನ ಹತ್ಯೆಗೆ ಮಹಿಳೆ ಕಾರಣವಾಗಿದ್ದಾಳೆ ಎನ್ನುವ ಶಂಕೆಯಲ್ಲಿ ಆಕೆಯನ್ನು ನೂರಾರು ಉದ್ರಿಕ್ತರು ಎಳೆದೊಯ್ದು ನಗ್ನ ಗೊಳಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿ ಥಳಿಸಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು,ಕಟ್ಟೆಚ್ಚರ ವಹಿಸಲಾಗಿದೆ.ಘಟನೆಯ ಕುರಿತು ನಿರ್ಲಕ್ಷ್ಯ ವಹಿಸಿದ ಆರೋಪದಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸೇರಿದಂತೆ 8 ಮಂದಿಯನ್ನು ಸರ್ಕಾರ ಅಮಾನತುಗೊಳಿಸಿದ್ದು , ಸಮಗ್ರ ತನಿಖೆಗೆ ಆದೇಶಿಸಿದೆ. ಹಿಂಸಾಚಾರ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದೆ.
ಘಟನೆಯ ಕುರಿತು ವಿಪಕ್ಷ ಆರ್ಜೆಡಿ ತೀವ್ರ ಆಕ್ರೋಶ ಹೊರ ಹಾಕಿದ್ದು ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ