ಕ್ರೂರವಾಗಿ ರೇಪ್‌ ಮಾಡಿ, ಕಣ್ಣುಗಳನ್ನು ಕಿತ್ತು ತೆಗೆದರು

Team Udayavani, Sep 6, 2018, 6:00 AM IST

23.jpg

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಥುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಂದ ಘಟನೆಗಿಂತ ಭೀಕರ, ಹೀನ ಕೃತ್ಯ ಬೆಳಕಿಗೆ ಬಂದಿದೆ. ಕಣಿವೆ ರಾಜ್ಯದ ಉರಿಯಿಂದ ಆ.23ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಸೆ.2ರಂದು ಬಾರಾಮುಲ್ಲಾ ಜಿಲ್ಲೆಯ ಕಾಡಿನಲ್ಲಿ ಪತ್ತೆಯಾಗಿದೆ. ಆಕೆಯ ಮೇಲೆ ಎಸಗಲಾಗಿರುವ ಕ್ರೂರತೆಯ ಪರಾಕಾಷ್ಠೆ ಹೇಗಿದೆ ಎಂದರೆ ಚೂರಿಯಿಂದ ಕಣ್ಣುಗಳನ್ನು ಕಿತ್ತು ತೆಗೆಯಲಾಗಿದೆ. ಆಕೆಯ ದೇಹದ ಖಾಸಗಿ ಭಾಗಕ್ಕೆ ಆ್ಯಸಿಡ್‌ ಹಾಕಿ ಕ್ರೌರ್ಯ ಮೆರೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಾಯಿ, ಮಲ ಸಹೋದರ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಹೇಯ ಕೃತ್ಯದ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.

ಅವರನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅಸುನೀಗಿದ ಬಾಲಕಿಯ ತಾಯಿಗೆ ಪತಿಯ 2ನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಸೇಡು ಇತ್ತು. ಹೀಗಾಗಿ ಬಾಲಕಿಯನ್ನು ಮುಗಿಸುವ ಯೋಚನೆ ರೂಪಿಸಲಾಗಿತ್ತು. ಅದರಂತೆ 14 ವರ್ಷದ ಮಲ ಸಹೋದರನೇ ಕರುಣೆಯಿಲ್ಲದೆ ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿದ್ದ. ಈ ಸಂದರ್ಭದಲ್ಲಿ ಮಲ ತಾಯಿಯೇ ಖುದ್ದು ವೀಕ್ಷಿಸುತ್ತಿದ್ದಳು ಎಂಬ ವಿಚಾರ ಬಹಿರಂಗವಾಗಿದೆ. ಅತ್ಯಂತ ಆಘಾತಕಾರಿ ವಿಚಾರವೆಂದರೆ ಮಲ ತಾಯಿಯೇ ಕೊನೆಯಲ್ಲಿ ಕತ್ತು ಹಿಸುಕಿ ಬಾಲಕಿಯನ್ನು ಹತ್ಯೆ ಮಾಡಿದ್ದಾಳೆ. ಉಳಿದವರು ಆ್ಯಸಿಡ್‌ ಅನ್ನು ಬಾಲಕಿಯ ದೇಹದ ಖಾಸಗಿ ಭಾಗ, ಇತರ ಅಂಗಾಗಗಳಿಗೆ ಆ್ಯಸಿಡ್‌ ಎರಚಿದ್ದಾರೆ ಎಂದು ಬಾರಾಮುಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಮಿ¤ಯಾಜ್‌ ಹುಸೇನ್‌ ಮಿರ್‌ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಚೂರಿ, ಆ್ಯಸಿಡ್‌ ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಥುವಾ ಅತ್ಯಾಚಾರಕ್ಕೆ ಗಲಾಟೆ ಎಬ್ಬಿಸಿದ ರಾಜಕೀಯ ಪಕ್ಷಗಳು ಅದಕ್ಕಿಂತ ಭೀಕರ ಹೇಯ ಕೃತ್ಯಕ್ಕೆ ಮೌನವಾಗಿಯೇ ಉಳಿದಿವೆ.

ಸೇಡು ಪ್ರಮುಖ ಕಾರಣ
ಅಸುನೀಗಿದ ಬಾಲಕಿ ಮತ್ತೂಬ್ಬ ಪತ್ನಿಯ ಪುತ್ರಿಯಾಗಿದ್ದಾಳೆ. ಪತಿ ಅವಳ ಜತೆಗೆ ಹೆಚ್ಚು ಕಾಲ ಕಳೆಯುತ್ತಾರೆ. ಅದರಿಂದ ರೊಚ್ಚಿಗೆದ್ದು ಈ ಕೃತ್ಯವೆಸಗಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಇಮ್ತಿಯಾಜ್‌ ಹುಸೇನ್‌ ಹೇಳಿದ್ದಾರೆ. ಬಾಲಕಿಯ ಮತ್ತೂಬ್ಬ ಪತ್ನಿ ಜಾರ್ಖಂಡ್‌ ಮೂಲದವರಾಗಿದ್ದಾರೆ. ಮನೆಯಿಂದ ಒಂದು ಕಿಮೀ ದೂರದಲ್ಲಿರುವ ಸ್ಥಳದಲ್ಲಿ ಅಸುನೀಗಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಸ್ನೇಹಿತರೊಂದಿಗೆ ಅತ್ಯಾಚಾರ ಎಸಗಿದ ಬಳಿಕ ಶವವನ್ನು ಸೊಪ್ಪು ಮತ್ತಿತರ ವಸ್ತುಗಳಿಂದ ಮುಚ್ಚಲಾಗಿತ್ತು. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.