10ಕ್ಕೆ ಕಾಂಗ್ರೆಸ್ನಿಂದ ಭಾರತ್ ಬಂದ್
Team Udayavani, Sep 7, 2018, 6:00 AM IST
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸೆ.10 (ಸೋಮವಾರ)ರಂದು ದೇಶಾದ್ಯಂತ ಬಂದ್ಗೆ ಕಾಂಗ್ರೆಸ್ ಕರೆ ನೀಡಿದೆ.
ಜತೆಗೆ ಇತರ ಪ್ರತಿಪಕ್ಷಗಳ ನಾಯಕರು, ಸಂಘ-ಸಂಸ್ಥೆಗಳು ಪಕ್ಷದ ನಿರ್ಧಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುಜೇìವಾಲಾ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಯಂತ್ರಿಸಲು ಮೋದಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತೈಲೋತ್ಪನ್ನಗಳ ಬೆಲೆ ಏರಿಕೆಯಿಂದ ಕೇಂದ್ರ ಸರಕಾರ 11 ಲಕ್ಷ ಕೋಟಿ ರೂ. ಸಂಗ್ರಹಿಸಿದೆ. ಇದೊಂದು “ಇಂಧನ ಲೂಟಿ’ (ಫ್ಯೂಯೆಲ್ ಲೂಟ್) ಎಂದು ಸುಜೇìವಾಲಾ ಬಣ್ಣಿಸಿದ್ದಾರೆ. ಹೀಗಾಗಿ, ಕೇಂದ್ರ ಸರಕಾರ ತೈಲೋತ್ಪನ್ನಗಳ ಮೇಲೆ ಅಬಕಾರಿ ಸುಂಕ (ಎಕ್ಸೆ„ಸ್ ಡ್ನೂಟಿ), ರಾಜ್ಯ ಸರಕಾರಗಳ ವ್ಯಾಪ್ತಿಯಲ್ಲಿ ವ್ಯಾಟ್ ತಗ್ಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಭಾಷಣ ಮತ್ತು ಭರವಸೆ ನೀಡುವುದರಲ್ಲಿಯೇ ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ