ಕಾಯ್ದೆಗೆ ತಡೆ ತರಲಾಗದು
Team Udayavani, Sep 08, 2018, 10:37 AM IST

ಹೊಸದಿಲ್ಲಿ: ಸಂಸತ್ನಲ್ಲಿ ಅನುಮೋದನೆಗೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ವಿಧೇಯಕ ಈಗ ಕಾನೂನಾಗಿ ಜಾರಿಯಾಗಿದೆ. ಹೀಗಾಗಿ ಅದರ ಜಾರಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹೊಸ ತಿದ್ದುಪಡಿಗಳನ್ನು ತಪ್ಪು ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಎ.ಕೆ.ಸಿಕ್ರಿ ಮತ್ತು ನ್ಯಾ.ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ ಈ ಅಭಿಪ್ರಾಯಪಟ್ಟಿದೆ. ಜತೆಗೆ ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿ, ಆರು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.