ನೇಣು ಕುಣಿಕೆಯಲ್ಲೇ ಮಗುವಿಗೆ ಜನ್ಮ ನೀಡಿದಳು
Team Udayavani, Dec 22, 2018, 9:30 AM IST
ಕಾಟ್ನಿ (ಮಧ್ಯಪ್ರದೇಶ): ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಯ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಕಾಟ್ನಿ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೀ ಠಾಕೂರ್ (36) ಎಂಬಾಕೆ ಗುರುವಾರ ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪತಿ ಸಂತೋಷ್, ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ, ಜೀವ ಹೋಗುವ ಸಂದರ್ಭದಲ್ಲಿ ಲಕ್ಷ್ಮೀ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗುವು ಕರುಳ ಬಳ್ಳಿಯೊಂದಿಗೆ ಇನ್ನೂ ಸಂಪರ್ಕ ಹೊಂದಿದ್ದು ಗೊತ್ತಾಗಿದೆ. ತಕ್ಷಣವೇ ಪ್ರಸೂತಿ ತಜ್ಞೆಯೊಬ್ಬರನ್ನು ಕರೆಯಿಸಿ, ಮಗುವನ್ನು ತಾಯಿಯಿಂದ ಸುರಕ್ಷಿತವಾಗಿ ಬೇರ್ಪಡಿಸಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು