ಮೋದಿ ಟೀಕಿಸಲು ಹೋಗಿ ರಮ್ಯಾ ಯಡವಟ್ಟು
Team Udayavani, Sep 19, 2018, 5:23 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಬಗ್ಗೆ ಅಪಪ್ರಚಾರದ ಟ್ವೀಟೊಂದನ್ನು ಮಾಡಿರುವ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ದಿವ್ಯ ಸ್ಪಂದನ (ರಮ್ಯಾ) ಹೊಸ ವಿವಾದಕ್ಕೆ ಸಿಲುಕಿದ್ದಾರೆ.
1998ರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದ ನರೇಂದ್ರ ಮೋದಿಯವರನ್ನು ಆಗ ಪತ್ರಕರ್ತರಾಗಿದ್ದ ಹಾಲಿ ಬಿಜೆಪಿ ಸಂಸದ ರಾಜೀವ್ ಶುಕ್ಲಾ ಅಂದೊಮ್ಮೆ ಸಂದ ರ್ಶಿಸಿದ್ದ ವಿಡಿಯೋದ ಆಯ್ದ ಭಾಗಗಳುಳ್ಳ ವಿಡಿಯೋ ಕ್ಲಿಪ್ ಅನ್ನು ಟ್ವಿಟರ್ನಲ್ಲಿ ಮಂಗಳವಾರ ಪ್ರಕ ಟಿಸಿದ್ದ ರಮ್ಯಾ, “ಇದರಲ್ಲಿ ಸಾಹೇಬರು (ಮೋದಿ) ತಾವು ಹೈಸ್ಕೂಲಿನವರೆಗೆ ಮಾತ್ರ ಓದಿರುವುದು ಎಂದು ಹೇಳಿಕೊಂಡಿದ್ದಾರೆ. ಆದರೆ, ಈಗ ಸಾಹೇಬರ ಬಳಿ ಪದವಿ ಪ್ರಮಾಣ ಪತ್ರಗಳಿವೆ’ ಎಂದು ಲೇವಡಿ ಮಾಡಿದ್ದರು.
ಆದರೆ, ಅಸಲಿಗೆ ಮೋದಿಯವರು ತಾವು ಮೊದಲು ಹೈಸ್ಕೂಲುವರೆಗೆ ಓದಿದ್ದು, ಆನಂತರ ಬಿಎ, ಎಂಎ ಪದವಿಗಳನ್ನು ದೂರಶಿಕ್ಷಣದ ಮೂಲಕ ಪಡೆದಿರುವುದಾಗಿ ಹೇಳಿದ್ದರು. ರಮ್ಯಾ ಟೀಕೆಯ ಬೆನ್ನಲ್ಲೇ ವಿಡಿಯೋದ ಸತ್ಯಾಸತ್ಯತೆಯನ್ನು ಟ್ವೀಟಿಗರು ಹೊರಹಾಕಿ ರಮ್ಯಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗಾಗಿ, ಕ್ಷಮೆ ಯಾಚಿಸಿದ ರಮ್ಯಾ, ಆ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್