ಖ್ಯಾತ ವಯಲಿನ್‌ ವಾದಕ ಬಾಲಭಾಸ್ಕರ್‌ ನಿಧನ 

Team Udayavani, Oct 3, 2018, 2:15 AM IST

bala-bhaskar-3-10.jpg

ತಿರುವನಂತಪುರ : ಕಳೆದ ತಿಂಗಳು ರಸ್ತೆ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ವಯಲಿನ್‌ ವಾದಕ ಬಾಲಭಾಸ್ಕರ್‌ ಅವರು ಮಂಗಳವಾರ ಬೆಳಗಿನ ಜಾವ ನಿಧನ ಹೊಂದಿದರು. ಅವರಿಗೆ 40 ವರ್ಷ ವಯಸ್ಸಾಗಿತ್ತು. ಸೆ. 25ರಂದು ಸಂಭವಿಸಿದ ಅಪಘಾತದಲ್ಲಿ ಬಾಲಭಾಸ್ಕರ್‌ ಅವರ ಎರಡು ವರ್ಷದ ಮಗಳು ಸಾವಿಗೀಡಾಗಿದ್ದರೆ ಬಾಲಭಾಸ್ಕರ್‌ ಮತ್ತು ಅವರ ಪತ್ನಿ ಲಕ್ಷ್ಮೀ ತೀವ್ರವಾಗಿ ಗಾಯಗೊಂಡಿದ್ದರು. ಬಾಲಭಾಸ್ಕರ್‌ ಕುಟುಂಬ ತೃಶ್ಶೂರ್‌ನ ದೇಗುಲವೊಂದರಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು.

ತೀವ್ರ ಗಾಯಗೊಂಡಿದ್ದ ಬಾಲಭಾಸ್ಕರ್‌ ಅವರಿಗೆ ಶಸ್ತ್ರಚಿಕಿತ್ಸೆಯೊಂದನ್ನು ನಡೆಸಲಾಗಿತ್ತು. ಸೋಮವಾರ ಮಧ್ಯರಾತ್ರಿ ಬಳಿಕ 1 ಗಂಟೆ ವೇಳೆ ಅವರಿಗೆ ಭಾರೀ ಹೃದಯಾಘಾತ ಸಂಭವಿಸಿತು ಮತ್ತು ಅವರು ಕೊನೆಯುಸಿರೆಳೆದರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಬಾಲಭಾಸ್ಕರ್‌ ಮತ್ತು ಲಕ್ಷ್ಮೀ ದಂಪತಿಗೆ ವಿವಾಹವಾದ 16 ವರ್ಷಗಳ ಬಳಿಕ ಏಕೈಕ ಪುತ್ರಿ ತೇಜಸ್ವಿನಿ ಜನಿಸಿದ್ದಳು. ಬಾಲಭಾಸ್ಕರ್‌ ಅವರು ಕನಿಷ್ಠ ಮೂರು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದರಲ್ಲದೆ ಅನೇಕ ಮ್ಯೂಸಿಕ್‌ ಆಲ್ಬಂಗಳನ್ನು ಹೊರ ತಂದಿದ್ದರು ಹಾಗೂ ಕೇರಳಿಗರಿಗೆ ಫ್ಯೂಶನ್‌ ಸಂಗೀತವನ್ನು ಪರಿಚಯಿಸಿದ್ದರು. ಅಲ್ಲದೆ ಅನೇಕ ವೇದಿಕೆಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದರು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಬಾಲಭಾಸ್ಕರ್‌ ಅವರ ಕಳೇಬರಕ್ಕೆ ಪುಷ್ಪಗುಚ್ಛವಿರಿಸಿ ಅಂತಿಮ ನಮನ ಸಲ್ಲಿಸಿದರಲ್ಲದೆ ಅವರ ನಿಧನದಿಂದ ಸಂಗೀತಲೋಕ ಅತ್ಯಂತ ಪ್ರತಿಭಾನ್ವಿತ ಕಲಾವಿದನೋರ್ವನನ್ನು ಕಳಕೊಂಡಿದೆಯೆಂದು ಹೇಳಿದರು. ಕಳೇಬರವನ್ನು ತಿರುವನಂತಪುರದ ಯೂನಿವರ್ಸಿಟಿ ಕಾಲೇಜಿನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಬಾಲಭಾಸ್ಕರ್‌ ಅವರ ಸಹಸ್ರಾರು ಅಭಿಮಾನಿಗಳು ಅವರಿಗೆ ಅಂತಿಮ ನಮನ ಸಲ್ಲಿಸಿದರು. ತಿರುಮಲದ ಅವರ ಪೂರ್ವಿಕರ ಮನೆ ಸಮೀಪ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆಯೆಂದು ರಾಜ್ಯದ ಸಂಸ್ಕೃತಿ ಸಚಿವ ಎ.ಕೆ. ಬಾಲನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.