ಕಾಶ್ಮೀರ ಚುನಾವಣೆ: ಬಿಜೆಪಿಗೆ ಭಾರೀ ಜಯ
Team Udayavani, Oct 21, 2018, 8:44 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಮ್ಮುವಿನಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ, ಕಾಶ್ಮೀರದಲ್ಲಿ ಕಾಂಗ್ರೆಸ್ ಸ್ವಲ್ಪ ಚೇತರಿಸಿ ಕೊಂಡಿದೆ. ಜಮ್ಮುವಿನಲ್ಲಿ 212 ವಾರ್ಡ್ಗಳಲ್ಲಿ ಬಿಜೆಪಿ, 110 ರಲ್ಲಿ ಕಾಂಗ್ರೆಸ್, 13ರಲ್ಲಿ ನ್ಯಾಶನಲ್ ಪ್ಯಾಂಥರ್ಸ್ ಪಾರ್ಟಿ ಹಾಗೂ 185 ಸ್ವತಂತ್ರರು ಆಯ್ಕೆಯಾಗಿದ್ದಾರೆ. ಇನ್ನು ಕಾಶ್ಮೀರ ದಲ್ಲಿ 79ರಲ್ಲಿ ಕಾಂಗ್ರೆಸ್, 75ರಲ್ಲಿ ಬಿಜೆಪಿ, 71ರಲ್ಲಿ ಸ್ವತಂತ್ರರು ಮತ್ತು 2ರಲ್ಲಿ ಪೀಪಲ್ಸ್ ಕಾಂಗ್ರೆಸ್ ಹಾಗೂ 2 ಇತರರು ಗೆಲುವು ಸಾಧಿಸಿದ್ದಾರೆ. ಕುಪ್ವಾರಾದಲ್ಲಿನ ಎಲ್ಲ 13 ಕ್ಷೇತ್ರ ಗಳಲ್ಲೂ ಪೀಪಲ್ ಕಾನ್ಫರೆನ್ಸ್ ಮುಖಂಡ ಸಜ್ಜದ್ ಗನಿ ಲೋನ್ ಬೆಂಬಲಿಗರು ಗೆಲುವು ಸಾಧಿಸಿದ್ದಾರೆ. ಜಮ್ಮುವಿನ ಒಟ್ಟು 10 ಜಿಲ್ಲೆಗಳ ಪೈಕಿ ಏಳು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತ ನಡೆಸಲಿದೆ. ಉಗ್ರರ ಉಪಟಳ ಹೆಚ್ಚಿರುವ ಕಾಶ್ಮೀರದ ಬಾರಾಮುಲ್ಲಾ, ಅನಂತ್ನಾಗ್ ಹಾಗೂ ಶೋಪಿ ಯಾನ್ನಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚಿನ ಸ್ಥಾನ ಪಡೆದಿರುವುದು ಗಮನ ಸೆಳೆದಿದೆ.
ಇದೇ ವೇಳೆ ಶ್ರೀನಗರ ಮುನಿಸಿಪಲ್ ಕಾರ್ಪೊರೇಷನ್ನಲ್ಲಿ ಜಾತ್ಯತೀತ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಲು ಉತ್ಸಾಹ ಹೊಂದಿರುವುದಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ