ಪೆಟ್ರೋಲ್,ಡೀಸೆಲ್ ಇಳಿಕೆ
Team Udayavani, Oct 22, 2018, 3:16 PM IST
ಹೊಸದಿಲ್ಲಿ: ದೇಶಾದ್ಯಂತ ರವಿವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಉಂಟಾಗಿದೆ. ಸತತ 2 ತಿಂಗಳ ಏರಿಕೆಯ ಬಳಿಕ ಸತತ ನಾಲ್ಕನೇ ದಿನ ತೈಲೋತ್ಪನ್ನಗಳ ದರ ಇಳಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ಗೆ 25 ಪೈಸೆ, ಪ್ರತಿ ಲೀಟರ್ ಡೀಸೆಲ್ಗೆ 17 ಪೈಸೆ ಇಳಿಕೆಯಾಗಿದೆ. ಹೀಗಾಗಿ ಹೊಸದಿಲ್ಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 81.74 ರೂ., ಡೀಸೆಲ್ಗೆ 75.19ರೂ., ಮುಂಬಯಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 87.21 ರೂ., ಡೀಸೆಲ್ಗೆ 78.82, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 82.38 ರೂ., (26 ಪೈಸೆ ಇಳಿಕೆ), ಡೀಸೆಲ್ಗೆ 75.58 ರೂ. (17 ಪೈಸೆ ಇಳಿಕೆ)ಯಾಗಿದೆ. ಅ.9ರಂದು ಸತತ ದರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 2.50 ರೂ. ತೆರಿಗೆ ಪ್ರಮಾಣ ಕಡಿತ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ