ಮ.ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ
Team Udayavani, Nov 9, 2018, 6:00 AM IST
ಹೊಸದಿಲ್ಲಿ: ಮಧ್ಯಪ್ರದೇಶದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಟೈಮ್ಸ್ ನೌ-ಸಿಎನ್ಎಕ್ಸ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. 230 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 122 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆಯಲಿದ್ದರೆ, ಕಾಂಗ್ರೆಸ್ 95 ಸ್ಥಾನಗಳಲ್ಲಿ ಗೆದ್ದು ಪ್ರತಿಪಕ್ಷ ಸ್ಥಾನದಲ್ಲಿ ಮುಂದುವರಿಯಲಿದೆ. ಬಿಎಸ್ಪಿ 3 ಹಾಗೂ ಇತರರು 10 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಆದರೆ ಬಿಜೆಪಿಯ ಹಾಲಿ ಸಂಖ್ಯಾಬಲ ಕುಸಿಯಲಿದ್ದು, 165 ರಿಂದ 122ಕ್ಕೆ ಕುಸಿಯಲಿದೆ. ಇದೇ ವೇಳೆ ಕಾಂಗ್ರೆಸ್ನ ಸಂಖ್ಯಾಬಲವು 58 ರಿಂದ 95ಕ್ಕೆ ಏರಿಕೆಯಾಗಲಿದೆ. ಮತ ಹಂಚಿಕೆ ಶೇ.41.75 ಅಗಿರಲಿದೆ ಎಂದು ಸಮೀಕ್ಷೆ ವರದಿ ಮಾಡಿದ್ದು, 2013ರ ಚುನಾವಣೆಯಲ್ಲಿ ಇದು ಶೇ. 44.88 ಆಗಿತ್ತು. ಆದರೆ ಕಾಂಗ್ರೆಸ್ ಮತ ಹಂಚಿಕೆ ಪ್ರಮಾಣ ಶೇ. 36.38 ರಿಂದ ಶೇ. 38.52ಕ್ಕೆ ಏರಿಕೆಯಾಗಲಿದೆ. ಇದೇ ವೇಳೆ, ಉತ್ತಮ ನಾಯಕರಾಗಿ ಯಾರನ್ನು ಶಿಫಾರಸು ಮಾಡುತ್ತೀರಿ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಎಂಬುದಾಗಿ ಶೇ. 56.10 ರಷ್ಟು ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದರೆ, ರಾಹುಲ್ ಗಾಂಧಿ ಎಂಬುದಾಗಿ ಶೇ. 34.78 ರಷ್ಟು ಜನರು ಹೇಳಿದ್ದಾರೆ.
ಮಧ್ಯಪ್ರದೇಶ
ಬಿಜೆಪಿ – 122
ಕಾಂಗ್ರೆಸ್ – 95
ಬಿಎಸ್ಪಿ – 3
ಇತರ – 10
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ