9 ದಿನಗಳ ಗೋವಾ ಚಲನಚಿತ್ರೋತ್ಸವಕ್ಕೆ ಚಾಲನೆ ಇಂದು

Team Udayavani, Nov 20, 2018, 6:00 AM IST

goa.jpg

ಪಣಜಿ: ಒಂಭತ್ತು ದಿನಗಳ 49ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಇಫಿ) ಮಂಗಳವಾರ (ನ.20) ಆರಂಭವಾಗಲಿದ್ದು, ಪ್ರವಾಸಿಗರ ರಾಜ್ಯವಾದ ಗೋವಾದ ಚಿತ್ರನಗರಿ ಪಣಜಿ ಅತ್ಯಂತ ಸಂಭ್ರಮದಿಂದ ಸಿದ್ಧಗೊಂಡಿದೆ.

ನ.20 ರಿಂದ 28 ರವರೆಗೆ ನಡೆಯುವ 49 ನೇ ಇಫಿ ಚಲನಚಿತ್ರೋತ್ಸವದಲ್ಲಿ ಒಟ್ಟು 68 ದೇಶಗಳ 212 ಸಿನಿಮಾಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗೊಳ್ಳುವವು. ಚಿತ್ರೋತ್ಸವದ ಉದ್ಘಾಟನೆ ಅಪರಾಹ್ನ 4.30ಕ್ಕೆ ನಗರದ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಗೋವಾದ ಗೌರ್ನರ್‌ ಮೃದುಲಾ ಸಿನ್ಹಾ ಉದ್ಘಾಟಿಸುವರು. ಕೇಂದ್ರ ಸಚಿವ ರಾಜ್ಯವರ್ಧನ್‌ಸಿಂಗ್‌ ರಾಥೋಡ್‌, ಗೋವಾದ ಲೋಕೋಪಯೋಗಿ ಖಾತೆ ಸಚಿವ ಸುಧೀರ್‌ ಮಾಧವ್‌ ದವಾಲಿಕರ್‌ ಪಾಲ್ಗೊಳ್ಳುವರು. ಚಿತ್ರೋತ್ಸವದ ಉದ್ಘಾಟನೆ ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಪಾಲ್ಗೊಳ್ಳುವರು.

ಸ್ಥಳ ಬದಲಿಲ್ಲ: ಈ ಬಾರಿ ಚಲನಚಿತ್ರೋತ್ಸವವನ್ನು ಡೋನಾ ಪೋಲಾದಲ್ಲಿ ನಿರ್ಮಿಸಲಾಗುವ ಹೊಸ ಸಂಕೀರ್ಣದಲ್ಲಿ ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿತ್ತಾದರೂ, ಈಗ ಹಿಂದಿನ ಐನಾಕ್ಸ್‌ ಆವರಣದಲ್ಲೇ ನಡೆಸಲಾಗುತ್ತಿದೆ. ಚಿತ್ರೋತ್ಸವಕ್ಕೆ ದಿ ಎಸ್ಪರ್ನ ಪೇಪರ್ ಎಂಬ ಚಿತ್ರದ ಮೂಲಕ ಚಾಲನೆ ಸಿಗಲಿದೆ. ಈ ಚಿತ್ರವನ್ನು ಅಮೆರಿಕದ ಜೂಲಿಯನ ಲಾಂಡಾಯಿಸ್‌ ನಿರ್ದೇಶಿಸಿದ್ದು, ಕಾದಂಬರಿಕಾರ ಹೆನ್ರಿ ಜೇಮ್ಸ ರ ಕಾದಂಬರಿ ಆಧಾರಿತವಾದದ್ದು.

ಈ ಬಾರಿಯ ವಿಶೇಷ: ಭಾರತೀಯ ಪನೋರಮಾ ವಿಭಾಗದಲ್ಲಿ ಒಟ್ಟಿ  26 ಕಥಾ ಹಾಗೂ 21 ಕಥೆಯೇತರ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಈ ವಿಭಾಗದ ಉದ್ಘಾಟನಾ ಚಿತ್ರವಾಗಿ ಮಲಯಾಳಂನ ನಿರ್ದೇಶಕ ಷಾಜಿ ಎನ. ಕರುಣ್‌ ನಿರ್ದೇಶಿತ ಚಿತ್ರ ಒಲು ಪ್ರದರ್ಶನಗೊಳ್ಳಲಿದೆ. ಕಥೇತರ ವಿಭಾಗದಲ್ಲಿ ಆದಿತ್ಯ ಸುಹಾಸ್‌ ಜಂಬಳೆ ಅವರು ನಿರ್ದೇಶಿಸಿದ ಖರ್ವಾಸ್‌ ಪ್ರದರ್ಶನಗೊಳ್ಳಲಿದೆ. ಬಂಗಾಳಿ, ಮಲಯಾಳಂ, ಮರಾಠಿ ಸೇರಿ ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳು ಈ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.ಬಹಳ ಪ್ರಮುಖವಾಗಿ ಅಂತಾರಾಷ್ಟ್ರೀಯ ಸ್ಪರ್ಧೆಯ ವಿಭಾಗದಡಿ 15 ಚಲನಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಈ ಪೈಕಿ 3 ಭಾರತೀಯ ಚಲನಚಿತ್ರಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿವೆ. ಚಲನ ಚಿತ್ರೋತ್ಸವದ ಉದ್ಘಾಟನಾ ಸಮಾರಂಭ ದೂರದರ್ಶನ ವಾಹಿನಿಯಲ್ಲಿ ಸಂಜೆ 4. 30 ರಿಂದ ನೇರ ಪ್ರಸಾರವಾಗಲಿದೆ.

ತುಳು ಚಲನಚಿತ್ರ  ಪ್ರದರ್ಶನ
ಈ ಚಿತ್ರೋತ್ಸವ ತುಳು ಚಲನಚಿತ್ರ ರಂಗಕ್ಕೆ ಮಹತ್ವದ ಮೈಲಿಗಲ್ಲು. ಯಾಕೆಂದರೆ ಭಾರತೀಯ ಪನೋರಮಾ ವಿಭಾಗಕ್ಕೆ ಕನ್ನಡದ ಯಾವ ಚಲನಚಿತ್ರವೂ ಆಯ್ಕೆಯಾಗಿಲ್ಲ. ಪ್ರಾದೇಶಿಕ ಭಾಷಾ ಚಲನಚಿತ್ರ ವಿಭಾಗದಡಿ ಅಭಯಸಿಂಹ ನಿರ್ದೇಶಿಸಿದ ತುಳು ಚಲನಚಿತ್ರ ಪಡ್ಡಾಯಿ ಪ್ರದರ್ಶನಗೊಳ್ಳುತ್ತಿದೆ. ಕರ್ನಾಟಕದ ಪರವಾಗಿ ಎಂಬಂತೆ ಪ್ರದರ್ಶನಗೊಳ್ಳುತ್ತಿರುವ ಏಕೈಕ ಚಲಚನಿತ್ರವಿದು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.