ನಾಲ್ವರು ಹಿಜ್ಬುಲ್ ಉಗ್ರರ ಹತ್ಯೆ
Team Udayavani, Nov 21, 2018, 4:10 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ನಾಲ್ವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಇಲ್ಲಿನ ನಾದಿಗಾಂ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತು. ಅಷ್ಟರಲ್ಲಿ, ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಈ ವೇಳೆ ನಡೆದ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯೋಧರು ಯಶಸ್ವಿಯಾದರು. ಕಾರ್ಯಾಚರಣೆಯಲ್ಲಿ ಯೋಧ ಎಚ್.ಸಿ. ವಿಜಯ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದರು. ಮತ್ತಿಬ್ಬರು ಯೋಧರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!