ಬಿಜೆಪಿಯ 2ನೇ ಹಂತದ ಹೋರಾಟ ಶುರು

Team Udayavani, Dec 4, 2018, 11:42 AM IST

sabarimala-temple-800.jpg

ತಿರುವನಂತಪುರ: ಶಬರಿಮಲೆ ದೇಗುಲ ವಿಚಾರದಲ್ಲಿ ಕೇರಳದಲ್ಲಿನ ಎಲ್‌.ಡಿ.ಎಫ್. ಸರಕಾರಜನರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, 2ನೇ ಹಂತದ ಹೋರಾಟವಾಗಿ ಕೇರಳ ವಿಧಾನಸಭೆ ಎದುರು ಸರಣಿ ಉಪವಾಸ ಮತ್ತು ಪ್ರತಿಭಟನೆಯನ್ನು ಆರಂಭಿಸಿದೆ. ಸೋಮವಾರ ಪಕ್ಷದ ನಾಯಕಿ ಸರೋಜ್‌ ಪಾಂಡೆ ಇದಕ್ಕೆ ಚಾಲನೆ ನೀಡಿದ್ದು, ಬಿಜೆಪಿ ನಾಯಕ ಎ.ಎನ್‌.ರಾಧಾಕೃಷ್ಣನ್‌ ನೇತೃತ್ವದಲ್ಲಿ ನಿರಶನ ಶುರುವಾಗಿದೆ. 14 ಜಿಲ್ಲೆಗಳ ನಾಯಕರು ಮತ್ತು ಕಾರ್ಯಕರ್ತರೂ ಇದರಲ್ಲಿ ಭಾಗಿಯಾಗಿದ್ದಾರೆ.

ತಿರುವನಂತಪುರದಲ್ಲಿ ನಿರಶನಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಸಂಸದೆ ಸರೋಜ್‌ ಪಾಂಡೆ, ಶಬರಿಮಲೆ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾವಿಸುತ್ತೇವೆ. ಚರ್ಚೆಗೆ ದಾರಿ ಯಾವತ್ತೂ ಮುಕ್ತವಾಗಿರಬೇಕು ಎಂದಿದ್ದಾರೆ. ಕೇರಳ ಸರಕಾರ ಶಬರಿಮಲೆ ವಿಚಾರವನ್ನು ಸಮರ್ಥವಾಗಿ ನಿಭಾಯಿಸಲಿಲ್ಲ ಎಂದೂ ದೂರಿದ್ದಾರೆ.

ಕೇರಳ ಬಿಜೆಪಿ ಅಧ್ಯಕ್ಷ ಪಿ.ಎಸ್‌.ಶ್ರೀಧರನ್‌ ಪಿಳ್ಳೆ ಮಾತನಾಡಿ ‘ಕೇರಳದಲ್ಲೀಗ ಅರಣ್ಯ ನ್ಯಾಯ ಪಾಲನೆಯಾಗುತ್ತಿದೆ. ಸಿಪಿಎಂನ ಸಂವಿಧಾನ ಪರಮೋಚ್ಚವಾದದ್ದಲ್ಲ. ಸಾರ್ವಕಾಲಿಕವಾಗಿ ಒಪ್ಪಿಕೊಂಡ ಭಾರತದ ಸಂವಿಧಾನವೇ ಶ್ರೇಷ್ಠವಾದದ್ದು’ ಎಂದರು. ಕೇರಳ ವಿಧಾನಸಭೆಯಲ್ಲಿಯೂ ಶಬರಿ ಮಲೆ ವಿವಾದ ಕೋಲಾಹಲಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ನಡುವೆ ವಾಗ್ವಾದ ನಡೆದಿದೆ. ಕಲಾಪ ಆರಂಭವಾಗುತ್ತಲೇ ಯುಡಿಎಫ್ನ ಮೂವರು ಶಾಸಕರು ಸದನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ  ಆರಂಭಿಸಿದರು.

ಶಾ ನಾಯಕರೇ?: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಚೆನ್ನಿತ್ತಲ ವಿರುದ್ಧ ಹರಿಹಾಯ್ದು “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆಯಂತೆ ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಅವರ ನಾಯಕ ರಾಹುಲ್‌ ಗಾಂಧಿಯೋ, ಅಮಿತ್‌ ಶಾ ಅವರೋ? ವಿಧಾನ ಸಭೆಯ ಹೊರಗೆ ಬಿಜೆಪಿ ನಾಯಕರು ಸತ್ಯಾಗ್ರಹ ನಡೆಸುವ ಘೋಷಣೆ ಮಾಡಿದಾಗಲೇ ಪ್ರತಿಪಕ್ಷ ಯುಡಿಎಫ್ ಶಾಸಕರು ಸದನದಲ್ಲಿ ನಿರಶನ ಘೋಷಿಸುತ್ತಾರೆ ಎಂದು ತಾವು ತಿಳಿದದ್ದು ಸರಿ ಎಂದಿದ್ದಾರೆ ಸಿಎಂ ಪಿಣರಾಯಿ. ಈ ಮಾತುಗಳಿಗೆ ವಿಪಕ್ಷ ಸದಸ್ಯರು ಕ್ರುದ್ಧಗೊಂಡು ಧರಣಿ ನಡೆಸಿ, ಬಳಿಕ ಸಭಾತ್ಯಾಗ ಮಾಡಿದರು.

ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ: ಪ್ರಹ್ಲಾದ ಜೋಶಿ
ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಶಿ, ಕೇರಳದಲ್ಲಿನ ಎಲ್‌ಡಿಎಫ್ ಸರಕಾರ‌ದಿಂದ ಶಬರಿಮಲೆಯ ಸಂಪ್ರದಾಯ ನಾಶವಾಗುತ್ತಿದೆ. ರಾಜ್ಯದ ಪರಿಸ್ಥಿತಿ ಅಧ್ಯಯನ ಮಾಡಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾಗೆ ವರದಿ ಸಲ್ಲಿಸಲಿದ್ದೇವೆ ಎಂದಿದ್ದಾರೆ. ಬ್ರಿಟಿಷರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತೇ ಹೊರತು, ವಿವಿಧ ನಂಬಿಕೆಗಳನ್ನು ಹೊಂದಿದ ಭಕ್ತರ ವಿರುದ್ಧವಲ್ಲ ಎಂದಿದ್ದಾರೆ. ಜತೆಗೆ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಜತೆಗೆ ಐಪಿಎಸ್‌ ಅಧಿಕಾರಿ ಯತೀಶ್‌ ಚಂದ್ರ ಅನುಚಿತವಾಗಿ ವರ್ತಿಸಿದ್ದು ಖಂಡನೀಯ. ಅವರ ವಿರುದ್ಧ ಸಂಸತ್‌ನಲ್ಲಿ ಹಕ್ಕುಚ್ಯುತಿ ಮಂಡಿಸಲು ಸಚಿವರಿಗೆ ಮನವಿ ಮಾಡುವುದಾಗಿಯೂ ಹೇಳಿದ್ದಾರೆ. ಕೇರಳ ರಾಜ್ಯ ಸರಕಾರಇದೇ ರೀತಿಯ ಧೋರಣೆ ಅನುಸರಿಸುತ್ತಿದ್ದರೆ, ಅದನ್ನು ಕಿತ್ತು ಬಂಗಾಲ ಕೊಲ್ಲಿಗೆ ಎಸೆಯುತ್ತೇವೆ ಎಂದೂ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.