ವಿಪಕ್ಷಗಳು ಮೊದಲು ಪ್ರಧಾನಿ ಅಭ್ಯರ್ಥಿ ಘೋಷಿಸಲಿ: ಬಿಜೆಪಿ ಸವಾಲು
Team Udayavani, Dec 10, 2018, 11:58 AM IST
ಕೋಲ್ಕತ : 2019ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಗ್ಗೂಡುತ್ತಿರುವುದು ಒಳ್ಳೆಯ ವಿಷಯವೇ. ಆದರೆ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲಿರುವ ತಮ್ಮ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ಮೊದಲು ಘೋಷಿಸಬೇಕು. ಅನಂತರವೇ ಅವರು ನಮ್ಮನ್ನು ಸೋಲಿಸುವ ಕನಸನ್ನು ಕಾಣಬಹುದು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ.
ಇಂದು ಸೋಮವಾರ ವಿರೋಧ ಪಕ್ಷಗಳು 2019ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗೂಡುವ ಬಗ್ಗೆ ಇಂದು ಸೋಮವಾರ ನಿರ್ಣಾಯಕ ಸಭೆ ನಡೆಸಲಿದ್ದು ಅದಕ್ಕೆ ಮುನ್ನವೇ ಬಿಜೆಪಿ ಈ ರೀತಿಯಲ್ಲಿ ಟಾಂಗ್ ನೀಡಿದೆ.
ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒಮ್ಮತದ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅದಕ್ಕಾಗಿಯೇ ಆಕೆ ಇಂದು ಸೋಮವಾರ ನಡೆಯುವ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಗೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ