ಮಿಜೋರಾಂನಲ್ಲಿ MNFಗೆ ಗದ್ದುಗೆ, ಈಶಾನ್ಯದಲ್ಲಿ ಕೈ ಪಾರುಪತ್ಯ ಅಂತ್ಯ
Team Udayavani, Dec 11, 2018, 10:32 AM IST
ನವದೆಹಲಿ:ಕಳೆದ ವಿಧಾನಸಭಾ ಚುನಾವಣೆಯಲ್ಲಿ 34 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಮಿಜೋರಾಂನಲ್ಲಿ ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ 09 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯವಾಗಿ ಸೋಲು ಕಂಡಿದ್ದರೆ, ಎಂಎನ್ ಎಫ್ 26 ಸ್ಥಾನ ಪಡೆದು ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
ಈಶಾನ್ಯ ರಾಜ್ಯಗಳ ಪೈಕಿ ಮಿಜೋರಾಂನಲ್ಲಿ ಮಾತ್ರ ಕಾಂಗ್ರೆಸ್ ನೇತೃತ್ವದ ಸರ್ಕಾರ ಇತ್ತು. ಆದರೆ ಈ ಬಾರಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಇಲ್ಲದಂತಾಗಿದೆ. ಹಾಲಿ ಮುಖ್ಯಮಂತ್ರಿ ಲಾಲ್ತನ್ ಹಾವ್ಲಾ 2008ರಿಂದ ಅಧಿಕಾರದಲ್ಲಿದ್ದರು. 2013ರಲ್ಲಿ ನಡೆದಿದ್ದ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಅವರು 2ನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 34ಸ್ಥಾನ, ಮಿಜೋ ನ್ಯಾಷನಲ್ ಫ್ರಂಟ್ ಮತ್ತು ಮಿಜೋರಾಮ್ ಪೀಪಲ್ಸ್ ಕಾನ್ಪರೆನ್ಸ್ ತಲಾ 5 ಸ್ಥಾನಗಳನ್ನು ಪಡೆದಿದ್ದವು. 2018ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರೋಧಿ ಅಲೆ ಹೆಚ್ಚಾಗಿದ್ದು, ಎಂಎನ್ ಎಫ್(26) ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರುವ ಹಾದಿ ಸುಗಮವಾದಂತಾಗಿದೆ. ಕಾಂಗ್ರೆಸ್ 05, ಇತರರು 08 ಹಾಗೂ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್