ಛತ್ತೀಸ್ ಗಢದಲ್ಲಿ 15 ವರ್ಷಗಳ BJP ಅಧಿಕಾರ ಅಂತ್ಯ, “ಕೈ”ಗೆ ಗದ್ದುಗೆ
Team Udayavani, Dec 11, 2018, 11:23 AM IST
ನವದೆಹಲಿ: ಬುಡಕಟ್ಟು ರಾಜಯ ಛತ್ತೀಸ್ ಗಢದ 90 ಸದಸ್ಯ ಬಲ ಹೊಂದಿದ್ದ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 64 ಸ್ಥಾನ ಪಡೆಯುವ ಮೂಲಕ ಅಧಿಕಾರದ ಗದ್ದುಗೆಗೆ ಏರುವ ಮೂಲಕ ಕಳೆದ 15 ವರ್ಷಗಳಿಂದ ಮುಖ್ಯಮಂತ್ರಿ ರಮಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಕೇವಲ 18 ಸ್ಥಾನ ಪಡೆಯುವುದರ ಜೊತೆಗೆ ಅಧಿಕಾರ ಕಳೆದುಕೊಂಡಿದೆ.
ಪ್ರತಿಬಾರಿಯೂ ಛತ್ತೀಸ್ ಗಢದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆಯೇ ತೀವ್ರ ಪೈಪೋಟಿ ನಡೆದು ಕುತೂಹಲಕಾರಿ ಫಲಿತಾಂಶಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತು. ಈ ಬಾರಿಯೂ ಕೂಡಾ ಪೈಪೋಟಿಯಲ್ಲಿ ಬಿಜೆಪಿ 18 ಸ್ಥಾನ ಪಡೆದಿದ್ದರೆ, ಕಾಂಗ್ರೆಸ್ 64 ಸ್ಥಾನ, ಜೆಸಿಸಿ 08 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಕಳೆದ ಬಾರಿ 90 ವಿಧಾನಸಭಾ ಸ್ಥಾನಗಳ ಛತ್ತೀಸ್ ಗಢದಲ್ಲಿ ಬಿಜೆಪಿ 49 ಸ್ಥಾನ ಪಡೆದು ಅಧಿಕಾರಕ್ಕೇರಿತ್ತು. ಕಾಂಗ್ರೆಸ್ 39 ಸ್ಥಾನ ಪಡೆದು ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು. ಈ ಬಾರಿ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ನೇತೃತ್ವದ ಜನತಾ ಕಾಂಗ್ರೆಸ್ ಛತ್ತೀಸ್ ಗಢ(ಜೆ) ಮತ್ತು ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ, ಬಹುಜನ ಸಮಾಜ ಪಕ್ಷ ಮೈತ್ರಿ ಮಾಡಿಕೊಂಡಿದ್ದವು. ಈ ಮೈತ್ರಿ ಕೂಟ ಗೆಲುವು ಸಾಧಿಸುವುದು ಕಷ್ಟ ಎಂಬ ಸಮೀಕ್ಷೆಗಳ ಲೆಕ್ಕಾಚಾರ ತಲೆಕೆಳಗಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ