ಇಂಧನ ತೆರಿಗೆ ಹೆಚ್ಚಳ: ವಾಗ್ವಾದ
Team Udayavani, Jan 6, 2019, 12:30 AM IST
ಹೊಸದಿಲ್ಲಿ/ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಪರಿಷ್ಕರಿಸಿದ ರಾಜ್ಯ ಸರಕಾರದ ಕ್ರಮಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಪೆಟ್ರೋಲ್, ಡೀಸೆಲ್ ದರದ ಮೇಲೆ ರಾಜ್ಯ ಸರಕಾರ ಹೆಚ್ಚುವರಿಯಾಗಿ ವಿಧಿಸಿರುವ ತೆರಿಗೆ ಇಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ರವಿವಾರ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್, ದೇಶಾದ್ಯಂತ ನಿತ್ಯ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸಿ ಜನ ವಿರೋಧಿ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದಿದ್ದಾರೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಅದಕ್ಷತೆ ಮತ್ತು ಭ್ರಷ್ಟಾಚಾರಕ್ಕೆ ಕರ್ನಾಟಕದ ಜನರೇಕೆ ಹೆಚ್ಚಿನ ಮೊತ್ತ ಪಾವತಿಸ ಬೇಕು ಎಂದು ಟ್ವೀಟ್ ಮಾಡಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ
ಸಿಎಂ ಸಮರ್ಥನೆ
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ರಾಜ್ಯ ಸರಕಾರದ ವಿವಿಧ ಯೋಜನೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಪ್ರಮಾಣದಲ್ಲಿ ಹೆಚ್ಚಿಸಿ ಸೆಸ್ ಸಂಗ್ರಹಿಸಲಾಗುತ್ತಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಡಿಮೆಯಿದೆ ಎಂದರು. ಸಾರಿಗೆ ಸಂಸ್ಥೆಗಳ ಮೇಲೆ ಸಾಲದ ಹೊರೆ ಹೆಚ್ಚಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಸಾರಿಗೆ ದರ ಹೆಚ್ಚಿಸುವಂತೆ ಇಲಾಖೆಯಿಂದ ಆರು ತಿಂಗಳ ಹಿಂದೆಯೇ ಪ್ರಸ್ತಾವನೆ ಬಂದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ