OTಯಲ್ಲಿ ನರ್ಸ್ಗೆ ಕಿಸ್, ವಿಡಿಯೋ ವೈರಲ್, ಸಿವಿಲ್ ಸರ್ಜನ್ ವಜಾ
Team Udayavani, Jan 14, 2019, 5:23 AM IST
ಉಜ್ಜೆ„ನ್ : ಇಲ್ಲಿನ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಆಪರೇಶನ್ ಥಿಯೇಟರ್ನಲ್ಲಿ ನರ್ಸ್ ಗೆ ಕಿಸ್ ನೀಡಿದ ಘಟನೆಯ ವಿಡಿಯೋ ಚಿತ್ರಿಕೆ ಹಲವಾರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದುದನ್ನು ಅನುಸರಿಸಿ ಆತನನ್ನು ಹುದ್ದೆಯಿಂದ ಕಿತ್ತು ಹಾಕಲಾಗಿರುವುದಾಗಿ ವರದಿಯಾಗಿದೆ.
ಜಿಲ್ಲಾಧಿಕಾರಿ ಶಶಾಂಕ್ ಮಿಶ್ರಾ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ಅನಪೇಕ್ಷಿತ ಮತ್ತು ಬೇಜವಾಬ್ದಾರಿಯ ವರ್ತನೆ ತೋರಿರುವ 49ರ ಹರೆಯದ ಸಿವಿಲ್ ಸರ್ಜನ್ ನನ್ನು ಹುದ್ದೆಯಿಂದ ಕಿತ್ತು ಹಾಕಲಾಗಿದೆ ಎಂದು ತಿಳಿಸಿದರು. ಆತನಿಂದ ಘಟನೆಯ ಬಗ್ಗೆ ವಿವರಣೆ ಕೋರುವ Notice ಜಾರಿ ಮಾಡಲಾಗಿದೆ ಎಂದು ಮಿಶ್ರಾ ಹೇಳಿದರು.
ಘಟನೆಯನ್ನು ಅನುಸರಿಸಿ ಕಳೆದ ಎರಡು ದಿನಗಳಿಂದ ರಜೆಯಲ್ಲಿರುವ ಸಿವಿಲ್ ಸರ್ಜನ್, ನೊಟೀಸಿಗೆ ಕೊಡುವ ಉತ್ತರದ ಆಧಾರದ ಮೇಲೆ ಆತನ ವಿರುದ್ಧದ ಮುಂದಿನ ಕ್ರಮ ನಿರ್ಧಾರವಾಗಲಿದೆ ಎಂದು ಜಿಲ್ಲಾಧಿಕಾರಿ ಮಿಶ್ರಾ ಹೇಳಿದರು.
ಈ ನಡುವೆ ಆಸ್ಪತ್ರೆಯ ನರ್ಸಿಂಗ್ ಸ್ಟಾಫ್ ಗಳಿಗೆ ಅವರ ವಾಟ್ಸಾಪ್ ಗ್ರೂಪ್ನಲ್ಲಿ ಘಟನೆಯ ಇನ್ನಷ್ಟು ಆಕ್ಷೇಪಾರ್ಹ ವಿಡಿಯೋ ಚಿತ್ರಿಕೆಗಳು ಬಂದಿವೆ. ಇವುಗಳನ್ನು ಉದ್ದೇಶಪೂರ್ವಕವಾಗಿ ಕಳುಹಿಸಲಾಗಿದೆಯೇ ಅಥವಾ ತಪ್ಪಿನಿಂದ ಕಳುಹಿಸಲಾಗಿದೆಯೇ ಎಂಬುದನ್ನು ತನಿಖೆ ಮಾಡಲಾಗುವುದು ಎಂದು ಡಿಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ