ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಮ್ಸ್ ಆಸ್ಪತ್ರಗೆ ದಾಖಲು
Team Udayavani, Jan 16, 2019, 5:11 PM IST
ಹೊಸದಿಲ್ಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಚ್1ಎನ್1 ನಿಂದ ಬಳಲುತ್ತಿದ್ದು ದೆಹಲಿಯ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ರಾತ್ರಿ ಅಮಿತ್ ಶಾ ಅವರು ಟ್ವೀಟ್ ಮಾಡಿದ್ದು, ನನಗೆ ಹಂದಿಜ್ವರ ಕಾಣಿಸಿಕೊಂಡಿದ್ದು, ಚಿಕಿತ್ಸೆ ನಡೆಯುತ್ತಿದೆ. ದೇವರ ಆಶೀರ್ವಾದ ಮತ್ತು ನಿಮ್ಮೆಲ್ಲರ ಪ್ರೀತಿ ಮತ್ತು ಶುಭಕೋರಿಕೆಯೊಂದಿಗೆ , ಶೀಘ್ರ ಗುಣಮುಖಲಾಗಲಿದ್ದೇನೆ ಎಂದು ಬರೆದಿದ್ದಾರೆ.
मुझे स्वाइन फ्लू हुआ है, जिसका उपचार चल रहा है। ईश्वर की कृपा, आप सभी के प्रेम और शुभकामनाओं से शीघ्र ही स्वस्थ हो जाऊंगा।
— Amit Shah (@AmitShah) January 16, 2019
ಅಮಿತ್ ಶಾ ಅವರಿಗೆ ವೈದ್ಯರ ತಂಡ ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ.