ಕಂಪೆನಿಗಳ ವಿರುದ್ಧ ಕ್ರಮ
Team Udayavani, Jan 24, 2019, 12:30 AM IST
ಹೊಸದಿಲ್ಲಿ: ಹಲವು ಕಂಪೆನಿಗಳು ಮೂಲದಲ್ಲಿ ತೆರಿಗೆ ಕಡಿತ ಮಾಡಿಕೊಂಡು ಅದನ್ನು ಆದಾಯ ತೆರಿಗೆ ಇಲಾಖೆಗೆ ಪಾವತಿ ಮಾಡದೇ ಮೋಸ ಮಾಡುತ್ತಿದ್ದ ಪ್ರಕರಣಗಳಲ್ಲ ಆದಾಯ ತೆರಿಗೆ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಮೊದಲ ಸುತ್ತಿನಲ್ಲಿ 10 ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ 10 ಕಂಪೆನಿಗಳು ಒಟ್ಟು 350 ಕೋಟಿ ರೂ. ಟಿಡಿಎಸ್ ಅನ್ನು ಪಾವತಿ ಬಾಕಿ ಉಳಿಸಿಕೊಂಡಿವೆ. ಆದಾಯ ತೆರಿಗೆ ಇಲಾಖೆ ಈ ಸಂಬಂಧ ಕ್ರಮ ಕೈಗೊಳ್ಳಲು ಮುಂದಾಗುತ್ತಿದ್ದಂತೆಯೇ ಕೆಲವು ಕಂಪೆನಿಗಳು ಸಮಸ್ಯೆ ಪರಿಹರಿಸಿಕೊಳ್ಳಲು ಮುಂದೆ ಬಂದಿವೆ. ಕ್ರೆಸ್ಟ್ ಲಾಜಿಸ್ಟಿಕ್ಸ್ ಕಂಪೆನಿಯು 110 ಕೋಟಿ ರೂ. ಟಿಡಿಎಸ್ ಪಾವತಿ ಬಾಕಿ ಉಳಿಸಿಕೊಂಡಿತ್ತು. ಅಲ್ಲದೆ ಹಬ್ಟೌನ್ 65 ಕೋಟಿ ರೂ., ಎಚ್ಸಿಸಿ 50 ಕೊಟಿ ರೂ. ಬಾಕಿ ಉಳಿಸಿಕೊಂಡಿತ್ತು. ಎರೋಸ್ ಇಂಟರ್ನ್ಯಾಷನಲ್ 19 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?