ಜಯಾ ಖಾತೆಗೆ ನಿರಂತರ ಜಮೆ: ಐಟಿಗೆ ತಲೆಬಿಸಿ!
Team Udayavani, Jan 28, 2019, 12:30 AM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನ ಹೊಂದಿ 2 ವರ್ಷಗಳೇ ಕಳೆದಿದ್ದರೂ ಅವರ ಬ್ಯಾಂಕ್ ಖಾತೆಗೆ ಅವರ ನಾನಾ ಸ್ಥಿರಾಸ್ತಿಗಳ ಬಾಡಿಗೆ ಇನ್ನೂ ಜಮೆಯಾಗುತ್ತಿದ್ದು, ವರ್ಷಗಳಿಂದ ಬಾಕಿ ಉಳಿದಿರುವ ಬಾಡಿಗೆ ಹಣದ ತೆರಿಗೆಯನ್ನು ಕಟ್ಟಲು ಯಾರೂ ಮುಂದೆ ಬರುತ್ತಿಲ್ಲ ಎಂದು ಆದಾಯ ತೆರಿಗೆ ಇಲಾಖೆ, ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣದಲ್ಲಿ ಚೆನ್ನೈನಲ್ಲಿ, ಅವರ ಜೀವಿತಾವಧಿಯ ಕೊನೆಯ 10 ವರ್ಷ ಕಳೆದಿರುವ ಚೆನ್ನೈನ ನಿವಾಸವನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜತೆಗೆ, ಪೋಯೆಸ್ ಗಾರ್ಡನ್ ಪ್ರಾಂತ್ಯದಲ್ಲಿರುವ ವೇದಂ ನಿವಾಸ, ಚೆನ್ನೈನಲ್ಲಿನ ಇತರ ಎರಡು ನಿವಾಸಗಳು, ಹೈದರಾಬಾದ್ನಲ್ಲಿರುವ ಒಂದು ನಿವಾಸವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆದರೆ, ಅವರ ಬ್ಯಾಂಕ್ ಖಾತೆಗೆ ಅವರ ನಿಧನಾ ಅನಂತರವೂ ವಿವಿಧ ಸ್ಥಿರಾಸ್ತಿಗಳಿಂದ ಬಾಡಿಗೆ ಹಣ ಜಮೆಯಾಗುತ್ತಲೇ ಇದ್ದು, ಈ ಹಣದ ತೆರಿಗೆ ಯಾರು ಕಟ್ಟಬೇಕೆನ್ನುವುದು ಪ್ರಶ್ನೆ ಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೈಕೋರ್ಟ್ಗೆ ಸಲ್ಲಿಸಿರುವ ಮಾಹಿತಿಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು