ಅತ್ಯಾಚಾರಿ ಶಿಕ್ಷಕನಿಗೆ ಮಾ.2ರಂದು ಗಲ್ಲು?
Team Udayavani, Feb 5, 2019, 12:30 AM IST
ಜಬಲ್ಪುರ (ಮಧ್ಯಪ್ರದೇಶ): ಸಾತ್ನಾ ಜಿಲ್ಲೆಯ ಪಾರಸ್ಮಾನಿಯ ಎಂಬ ಹಳ್ಳಿಯಲ್ಲಿ 4 ವರ್ಷಗಳ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ ಮಹೇಂದ್ರ ಸಿಂಗ್ ಗೊಂಡ್ (28) ಎಂಬಾತನಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಎತ್ತಿಹಿಡಿದಿದೆೆ. ಜಬಲ್ಪುರ ಕೇಂದ್ರೀಯ ಕಾರಾಗೃಹದಲ್ಲಿ ಮಾ. 2ರಂದು ಈತನನ್ನು ಗಲ್ಲಿಗೇರಿಸಲು ಆದೇಶಿಸಲಾಗಿದೆ.
ಇದು ಜಾರಿಗೊಂಡರೆ, 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಇತ್ತೀಚೆಗೆ ರೂಪಿಸಲಾಗಿರುವ ಕಾನೂನಿನಡಿ ಶಿಕ್ಷೆಗೆ ಗುರಿಯಾದ ಮೊದಲ ವ್ಯಕ್ತಿಯೆಂಬ ಕುಖ್ಯಾತಿಗೆ ಗೊಂಡ್ ಭಾಜನನಾಗಲಿದ್ದಾನೆ. 2018ರ ಸೆ. 18ರಂದು ಈತನಿಗೆ ಸ್ಥಳೀಯ ನ್ಯಾಯಾಲಯ ಈ ಶಿಕ್ಷೆ ಜಾರಿಗೊಳಿಸಿತ್ತು. ಆದರೆ, ಇದರ ವಿರುದ್ಧ ಆತ ಮಧ್ಯಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ್ದ. ಆದರೆ, ಜ. 25ರಂದು ಹೈಕೋರ್ಟ್, ಸ್ಥಳೀಯ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಈಗ ಪುನಃ ಸ್ಥಳೀಯ ನ್ಯಾಯಾಲಯದಿಂದ ಶಿಕ್ಷೆ ಜಾರಿಯಾಗಿದೆ. ಆದರೆ, ಈ ತೀರ್ಪಿನ ವಿರುದ್ಧ ಗೊಂಡ್ಗೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು, ರಾಷ್ಟ್ರಪತಿ ಬಳಿ ಕ್ಷಮಾದಾನ ಕೋರಲು ಅವಕಾಶವಿದೆ ಎಂದು ಜಬಲ್ಪುರ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ