ರಾಹುಲ್‌ ಗಾಂಧಿ ಫೇಲಾದ ವಿದ್ಯಾರ್ಥಿ

Team Udayavani, Feb 11, 2019, 12:30 AM IST

arun-jaitley-800-d.jpg

ಹೊಸದಿಲ್ಲಿ: ಫೇಲ್‌ ಆದ ವ್ಯಕ್ತಿ ಎಂದಿಗೂ ಟಾಪರ್‌ರನ್ನು ವಿರೋಧಿಸುತ್ತಾನೆ. ಹಾಗೆಯೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಒಬ್ಬ ಫೇಲಾದ ವಿದ್ಯಾರ್ಥಿಯಿದ್ದಂತೆ. ಅವರಿಗೆ ಟಾಪರ್‌ ನರೇಂದ್ರ ಮೋದಿ ಯವರನ್ನು ಕಂಡಾಗ ಸಹಜವಾಗಿಯೇ ಅಸೂಯೆ ಮೂಡುತ್ತದೆ. ಪ್ರತಿ ಬಾರಿ ಮಾತನಾಡುವಾಗಲೂ ಅವರ ಮಾತಿನಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವೈಯ ಕ್ತಿಕ ದಾಳಿಯೇ ಇರುತ್ತದೆ ಎಂದು ಕೇಂದ್ರ ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ ಜೇಟ್ಲಿ ಬ್ಲಾಗ್‌ನಲ್ಲಿ ರವಿವಾರ ಕಾಂಗ್ರೆಸ್‌ ವಿರುದ್ಧ ತೀವ್ರ ಟೀಕೆ ನಡೆಸಿದ್ದಾರೆ. ದೇಶದ ಸಂಸ್ಥೆಗಳನ್ನು ಬಿಜೆಪಿ ನಾಶ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ. ಆದರೆ ಸಂಸತ್ತನ್ನೇ ಬಲಹೀನಗೊಳಿಸಿದ್ದು ಇದೇ ಪಂಡಿತ್‌ ಜವಾಹರಲಾಲ ನೆಹರೂ ಅವರ ಮೊಮ್ಮಗ ಎಂದು ಜೇಟ್ಲಿ ಆರೋಪಿಸಿದ್ದಾರೆ. 

ಪ್ರತಿ ಅಧಿವೇಶನಕ್ಕೂ ಅಡ್ಡಿಪಡಿಸುವ ಪ್ರಯತ್ನವನ್ನು ಕಾಂಗ್ರೆಸ್‌ ಮಾಡುತ್ತಲೇ ಇದೆ. ರಾಜ್ಯಸಭೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಚರ್ಚೆ ನಡೆಯುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ. ಅಲ್ಲದೆ ರಾಹುಲ್‌ ಗಾಂಧಿ ಭಾಷಣದಲ್ಲಿ ಕಾಲೇಜು ಮಟ್ಟದ ಪ್ರಬುದ್ಧತೆ ಕಾಣಿಸುತ್ತದೆ. ಮೋದಿ ಸರಕಾರದ ವಿರುದ್ಧ ವಿಪಕ್ಷಗಳು ಸುಳ್ಳಿನ ಕ್ಯಾಂಪೇನ್‌ ನಡೆಸಿವೆ. ಸುಳ್ಳಿನ ಪ್ರಚಾರ ದೀರ್ಘ‌ಕಾಲದವರೆಗೆ ಬಾಳುವುದಿಲ್ಲ. ಒಂದು ಸುಳ್ಳಿನಿಂದ ಇನ್ನೊಂದು ಸುಳ್ಳಿಗೆ ರಾಹುಲ್‌ ಬದಲಾವಣೆ ಮಾಡುತ್ತಲೇ ಇದ್ದಾರೆ ಎಂದು ಜೇಟ್ಲಿ ತನ್ನ ಬ್ಲಾಗ್‌ನಲ್ಲಿ ಆರೋಪಿಸಿದ್ದಾರೆ. ಮತಯಂತ್ರದ ಬಗ್ಗೆ  ಕಾಂಗ್ರೆಸ್‌ ಹಾಗೂ ವಿಪಕ್ಷಗಳು ಆರೋಪ ಮಾಡುತ್ತಿವೆ. ಆದರೆ ಇದು ವಿರೋಧಿಯ ಮೇಲೆ ಆರೋಪ ಮಾಡುವ ತಂತ್ರ ಮಾತ್ರವಲ್ಲ. ಚುನಾವಣಾ ಆಯೋಗದ ಮೇಲೆ ಮಾಡುವ ದಾಳಿ ಎಂದು ಜೇಟ್ಲಿ ಆರೋಪಿಸಿದ್ದಾರೆ.

ನೈತಿಕ ದಿವಾಳಿತನಕ್ಕೆ ಮೋದಿ ಉದಾಹರಣೆ
ಅಸಮರ್ಥತೆ ಹಾಗೂ ಸೊಕ್ಕಿನಿಂದಾಗಿ ನೈತಿಕ ದಿವಾಳಿತನಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತಮ ನಿದರ್ಶನವಾಗಿ ಕಾಣುತ್ತಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಉದ್ಯೋಗ ಸೃಷ್ಟಿಯ ವಿಚಾರದಲ್ಲಿ ಆ್ಯಪ್‌ ಆಧರಿತ ಟ್ಯಾಕ್ಸಿ ಸಂಸ್ಥೆಗಳಾದ ಓಲಾ ಹಾಗೂ ಉಬರ್‌ ಸಂಸ್ಥೆಗಳು ಲಕ್ಷಗಟ್ಟಲೆ ಉದ್ಯೋಗ ಸೃಷ್ಟಿಸಿವೆ ಎಂದು ನೀತಿ ಆಯೋಗ ವರದಿ ಮಾಡಿದೆ. ಆದರೆ ಲಕ್ಷಗಟ್ಟಲೆ ಹೂಡಿಕೆ ಮಾಡಿ ನಾನೇ ಈ ಸಂಸ್ಥೆಗಳ ಮೂಲಕ ಉದ್ಯೋಗ ಪಡೆದುಕೊಂಡಿದ್ದೇನೆ. ಸರಕಾರ ನನಗೆ ಉದ್ಯೋಗ ದೊರಕಿಸಿಕೊಟ್ಟಿಲ್ಲ ಎಂದು ಡ್ರೈವರ್‌ ಒಬ್ಬರು ಹೇಳುತ್ತಾರೆ ಎಂದು ರಾಹುಲ್‌ ಟೀಕಿಸಿದ್ದಾರೆ. ಕಳೆದ 45 ವರ್ಷಗಳಲ್ಲೇ ಈ ವರ್ಷ ನಿರುದ್ಯೋಗ ದರ ಅತಿ ಹೆಚ್ಚು ಎಂದು ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿರುವುದನ್ನು ಆಧರಿಸಿ ರಾಹುಲ್‌ ವಾಗ್ಧಾಳಿ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ “ರಫೇಲ್‌ ಫೋಬಿಯಾ’ ಶುರುವಾಗಿದೆ. ಹಾಗಾಗಿ ಅವರು ನಾಚಿಕೆಯಿಲ್ಲದೇ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಬಳಸುತ್ತಿರುವ ಭಾಷೆಗಳು ಅವರ ಘನತೆಗೆ ತಕ್ಕುದಲ್ಲ.
– ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.