ಲೌಡ್ ಸ್ಪೀಕರ್ ಬಳಕೆ : ಸುಪ್ರೀಂ ಕೋರ್ಟ್ನಲ್ಲಿ ಬಿಜೆಪಿಗೆ ಮುಖಭಂಗ
Team Udayavani, Feb 11, 2019, 10:30 AM IST
ಹೊಸದಿಲ್ಲಿ :ರಾಜ್ಯದಲ್ಲಿನ ವಸತಿ ಪ್ರದೇಶಗಳ ವ್ಯಾಪ್ತಿಯಲ್ಲಿ ಲೌಡ್ ಸ್ಪೀಕರ್ ಗಳನ್ನು ಬಳಸಬಾರದು ಎಂಬ ಪಶ್ಚಿಮ ಬಂಗಾಲ ಸರಕಾರದ ಆದೇಶವನ್ನು ಪ್ರಶ್ನಿಸಿರುವ ಆಳುವ ಬಿಜೆಪಿ ಸುಪ್ರೀಂ ಕೋರ್ಟಿನಿಂದ ಮುಖಭಂಗವಾಗಿದೆ.
ರಾಜಕೀಯ ರಾಲಿಗಳಿಗಿಂತಲೂ ವಿದ್ಯಾರ್ಥಿಗಳ ಮುಂದಿರುವ ವಾರ್ಷಿಕ ಪರೀಕ್ಷೆಗಳು ಅತ್ಯಂತ ಮುಖ್ಯವಾಗಿವೆ; ಆದುದರಿಂದ ಪ.ಬಂಗಾಲ ಸರಕಾರ ರಾಜ್ಯದಲ್ಲಿನ ವಸತಿ ಪ್ರದೇಶಗಳಲ್ಲಿ ರಾಜಕೀಯ ರಾಲಿಗಳಲ್ಲಿ ಲೌಡ್ ಸ್ಪೀಕರ್ ಬಳಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶ ಸರಿಯಾಗಿಯೇ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ.ಬಂಗಾಲದ ವಸತಿ ಪ್ರದೇಶಗಳ ವ್ಯಾಪ್ತಿಯಲ್ಲಿ ರಾಜಕೀಯ ರಾಲಿಗಳ ಸಂದರ್ಭದಲ್ಲಿ ಲೌಡ್ ಸ್ಪೀಕರ್ ಬಳಸುವುದನ್ನು ಮೊದಲಾಗಿ ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿ ನಿಷೇಧಿಸಿತ್ತು.
ಕಲ್ಕತ್ತ ಹೈಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿದಿತ್ತು. ಬಿಜೆಪಿ ಇದನ್ನು ಪ್ರಶ್ನಿಸಿದಾಗ ಸುಪ್ರೀಂ ಕೋರ್ಟ್ ಕೂಡ ಅದನ್ನು ಎತ್ತಿ ಹಿಡಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು