3 ತಿಂಗಳಲ್ಲಿ “ಅಲ್ಪಸಂಖ್ಯಾಕ’ ಪದಕ್ಕೆ ವ್ಯಾಖ್ಯಾನ ನೀಡಿ: ಸುಪ್ರೀಂ
Team Udayavani, Feb 12, 2019, 12:30 AM IST
ಹೊಸದಿಲ್ಲಿ: “ಅಲ್ಪಸಂಖ್ಯಾಕ’ (ಮೈನಾರಿಟಿ) ಎಂಬ ಪದವನ್ನು ಯಾವ ರೀತಿ ಬಳಕೆ ಮಾಡಬಹುದು ಎಂಬ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ ರಾಷ್ಟ್ರೀಯ ಅಲ್ಪಸಂಖ್ಯಾಕರ ಆಯೋಗ (ಎನ್ಸಿಎಂ)ಕ್ಕೆ 3 ತಿಂಗಳ ಅವಧಿ ನೀಡಿದೆ. ವಿವಿಧ ರಾಜ್ಯಗಳಲ್ಲಿ “ಅಲ್ಪಸಂಖ್ಯಾಕ’ ವರ್ಗಕ್ಕೆ ಹಲವಾರು ಸಮುದಾಯಗಳು ಸೇರುವ ಹಿನ್ನೆಲೆಯಲ್ಲಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪೀಠ ವ್ಯಾಖ್ಯೆ ನಿರ್ಣಯಿಸುವಂತೆ ಆಯೋಗಕ್ಕೆ ಸೂಚಿಸಿದೆ. 2011ರ ಜನಗಣತಿಯ ಬಳಿಕ ಅಲ್ಪಸಂಖ್ಯಾಕ ಎಂಬ ಪದವನ್ನು ಮರು ವ್ಯಾಖ್ಯಾನಿಸಬೇಕಾಗಿದೆ. ಜಮ್ಮು ಸೇರಿ 8 ರಾಜ್ಯಗಳಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆ ಇದೆ ಎಂದು ಬಿಜೆಪಿ ನಾಯಕ, ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಸುಪ್ರೀಂಗೆ ಅರಿಕೆ ಮಾಡಿದ್ದರು. ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆ ಇರುವುದರಿಂದ ಅವರ ಮೂಲ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ ಎಂದು ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ