CONNECT WITH US  

ಮಕ್ಕಳ ಕಲಿಕೆಯೇ ಮುಖ್ಯ

ನವದೆಹಲಿ: 2013ರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಫೆಬ್ರವರಿ ಮತ್ತು ಮಾರ್ಚ್‌ ತಿಂಗಳ‌ಲ್ಲಿ ಧ್ವನಿವರ್ಧಕಗಳನ್ನು ಬಳಸದಂತೆ ಹೇರಿದ್ದ ನಿಷೇಧವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದ ಬಿಜೆಪಿಗೆ ಹಿನ್ನಡೆಯಾಗಿದೆ.

ಶಾಲೆ, ಕಾಲೇಜುಗಳ ಪರೀಕ್ಷೆಗಳು ಫೆಬ್ರವರಿ- ಮಾರ್ಚ್‌ ತಿಂಗಳಲ್ಲಿ ನಡೆಯುವ ಕಾರಣ ಜನವಸತಿ ಪ್ರದೇಶ ಮತ್ತು ಶಾಲೆ ಕಾಲೇಜುಗಳಿರುವ ಕಡೆಗಳಲ್ಲಿ ಧ್ವನಿವರ್ಧಕಕ್ಕೆ ನಿಷೇಧ ಹೇರಲಾಗಿತ್ತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಧ್ವನಿವರ್ಧಕಕ್ಕೆ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್‌ಗೆ ಬಿಜೆಪಿ ಅರ್ಜಿ ಸಲ್ಲಿಸಿತ್ತು. ಇದನ್ನು ತಿರಸ್ಕರಿಸಿರುವ ಕೋರ್ಟ್‌, ಚುನಾವಣೆ ಪ್ರಚಾರಕ್ಕಿಂತ ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ ಎಂದು ಹೇಳಿದೆ.


Trending videos

Back to Top