ಮಸೂದ್ಗೆ ಪಾಕ್ನಲ್ಲಿ ಲಾಡೆನ್ನಷ್ಟೇ ಭದ್ರತೆ!
Team Udayavani, Feb 17, 2019, 12:30 AM IST
ಪುಲ್ವಾಮಾ ದಾಳಿ ಹೊಣೆ ಹೊತ್ತಿರುವ ಜೈಶ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ಗೆ ಪಾಕ್ನಲ್ಲಿ ಉಗ್ರ ಒಸಾಮಾ ಬಿನ್ ಲಾಡೆನ್ಗೆ ನೀಡಿ ದಷ್ಟೇ ಭದ್ರತೆ ಒದಗಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈತ ಬಹಾವಲ್ಪುರದಲ್ಲಿ ಪಾಕಿ ಸ್ತಾನ ಸೇನಾ ಅಕಾಡೆಮಿಯಿಂದ ಅರ್ಧ ಕಿ.ಮೀಟರು ದೂರದಲ್ಲಿರುವ ಬೃಹತ್ ಬಂಗಲೆಯಲ್ಲಿ ವಾಸಿಸುತ್ತಿ ದ್ದಾನೆ. ಈತನ ಮನೆಯಿಂದ ಸ್ವಲ್ಪ ದೂರದಲ್ಲೇ ಸೇನಾ ಕಂಟೋನ್ಮೆಂಟ್ ಕೂಡ ಇದೆ. ಇದೇ ಪ್ರದೇಶದಲ್ಲಿ ಜಾಮಿಯಾ ಮಸೀದಿ ಸುಭಾನ್ ಅಲ್ಲಾ ಕೂಡ ಇದೆ. 2011ರ ಸುಮಾರಿಗೆ ಈ ಮಸೀದಿಯನ್ನು ಸಮಗ್ರ ವಾಗಿ ಮರುನಿರ್ಮಾಣ ಮಾಡಲಾಗಿದೆ. ಈ ಸ್ಥಳಕ್ಕೆ ಭದ್ರತೆ ಒದಗಿಸುವುದಕ್ಕಾಗಿ ಸಾರೈಕಿ ಚೌಕ್ ಎಂಬಲ್ಲಿ ಎಫ್6 ಯುದ್ಧ ವಿಮಾನಗಳನ್ನು ನಿಯೋಜಿಸಲಾಗಿದೆ. ಇಲ್ಲಿಂದ 8 ಕಿ.ಮೀ ದೂರದಲ್ಲಿ 30 ಸಾವಿರ ಯೋಧರ ಪಡೆಯ ಕೇಂದ್ರ ಕಚೇರಿ ಇದೆ. ಈ ಪ್ರದೇಶದಲ್ಲಿ ನ್ಯೂಕ್ಲಿಯರ್ ಆಂಕಾಲಜಿ ಇನ್ಸ್ಟಿಟ್ಯೂಟ್ ಹೆಸರಿನಲ್ಲಿ ಅಣ್ವಸ್ತ್ರವನ್ನೂ ನಿಯೋಜಿಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ