ಲೋಕ ಸಮರದಿಂದ ಹಿಂದೆ ಸರಿದ ತಲೈವಾ
Team Udayavani, Feb 18, 2019, 1:00 AM IST
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಮಿಳು ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಸ್ಪಷ್ಟಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಮೂಲಕವೇ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆಂಬ ಊಹಾಪೋಹಗಳಿಗೆ ಅವರು ಸದ್ಯದ ಮಟ್ಟಿಗೆ ತೆರೆ ಎಳೆದಿದ್ದಾರೆ.
ಚೆನ್ನೈನ ಪೋಯಸ್ ಗಾರ್ಡನ್ನಲ್ಲಿರುವ ತಮ್ಮ ನಿವಾಸದಲ್ಲಿ, ತಮ್ಮ ಅಭಿಮಾನಿ ಸಂಘಟನೆಯಾದ “ರಜನಿ ಮಕ್ಕಳ್ ಮಂದ್ರಂ’ನ ಜಿಲ್ಲಾ ಸಂಚಾಲಕರೊಂದಿಗೆ ಮಾತುಕತೆ ನಡೆಸಿದ ರಜನಿ, ಆನಂತರ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ತಮ್ಮ ನಿರ್ಧಾರದ ಜತೆಗೆ ತಮಿಳುನಾಡಿನ ಜನತೆಗೆ ಮನವಿ ಮಾಡಿರುವ ಅವರು, ರಾಜ್ಯದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ತಂದುಕೊಡಬಲ್ಲ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದಿದ್ದಾರೆ. ಅಲ್ಲದೆ, ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಯಾರು ಕೂಡ ತಮ್ಮ ಭಾವಚಿತ್ರ ಹಾಗೂ ರಜನಿ ಮಕ್ಕಳ್ ಮಂದ್ರ ಸಂಘಟನೆಯ ಧ್ವಜವನ್ನು ಬಳಸಬಾರದು ಎಂದು ತಾಕೀತು ಮಾಡಿದ್ದಾರೆ.
2017ರ ಡಿ. 31ರಂದು ತಾವು ರಾಜಕೀಯ ಪ್ರವೇಶ ಮಾಡುವುದಾಗಿ ಘೋಷಿಸಿದ್ದ ರಜನಿ, ಹೊಸ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡಿನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 234 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ