ಇಸ್ರೋ ತಜ್ಞರಿಗೆ ಫ್ರಾನ್ಸ್ನಲ್ಲಿ ತರಬೇತಿ
Team Udayavani, Mar 7, 2019, 12:30 AM IST
ಹೊಸದಿಲ್ಲಿ: ಗಗನಯಾನ ಯೋಜನೆ ಅಡಿ ಇಸ್ರೋ ಪರಿಣಿತರಿಗೆ ಫ್ರಾನ್ಸ್ನ ಟೌಲೋಸ್ ಸ್ಪೇಸ್ ಸೆಂಟರ್ನಲ್ಲಿ ಈ ತಿಂಗಳಿನಿಂದ ತರಬೇತಿ ಒದಗಿಸಲು ನಿರ್ಧರಿಸಲಾಗಿದೆ. ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆ ಸಿಎನ್ಇಎಸ್ ತರಬೇತಿ ನೀಡಲಿದೆ. ಹಿಂದೂ ಮಹಾಸಾಗರದಲ್ಲಿ ಹಡಗುಗಳನ್ನು ಗುರುತಿಸಿ ಟ್ರ್ಯಾಕ್ ಮಾಡುವುದಕ್ಕಾಗಿ ಭಾರತ ಮತ್ತು ಫ್ರಾನ್ಸ್ ಸಹಭಾಗಿತ್ವದಲ್ಲಿ ವಿಚಕ್ಷಣಾ ಉಪಗ್ರಹ ನಿರ್ಮಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಇಸ್ರೋ ಅಧ್ಯಕ್ಷ ಕೆ. ಶಿವನ್, ಸಿಎನ್ಇಎಸ್ ಅಧ್ಯಕ್ಷ ಜೀನ್ ವೆಸ್ ಲೆ ಗಾಲ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಟೌಲೋಸ್ನಲ್ಲಿ ಬಾಹ್ಯಾಕಾಶ ಯಾನಕ್ಕೆ ತರಬೇತಿ ನೀಡಲಾಗುತ್ತದೆ. ಫ್ರಾನ್ಸ್ -ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ತಂಡವನ್ನು ಗಗನಯಾನ ಯೋಜನೆಗೆ ರೂಪಿಸಲಾಗಿತ್ತು. ಗಗನಯಾನಿಗಳ ಆರೋಗ್ಯ ತಪಾಸಣೆ, ಬಾಹ್ಯಾಕಾಶ ತ್ಯಾಜ್ಯ ನಿರ್ವಹಣೆ ವಿಷಯಗಳ ತರಬೇತಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ