ಮತ್ತೆ ಲೋಕಪಾಲ ಸಭೆಗೆ ಖರ್ಗೆ ಬಹಿಷ್ಕಾರ
Team Udayavani, Mar 16, 2019, 12:30 AM IST
ಹೊಸದಿಲ್ಲಿ: ಶುಕ್ರವಾರ ನಡೆದ ಲೋಕಪಾಲ ಆಯ್ಕೆ ಸಮಿತಿ ಸಭೆಯನ್ನು ಸತತ ಏಳನೇ ಬಾರಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬಹಿಷ್ಕರಿಸಿದ್ದಾರೆ. ತಮ್ಮನ್ನು ಲೋಕಪಾಲ ಆಯ್ಕೆ ಸಮಿತಿಯ ವಿಶೇಷ ಆಹ್ವಾನಿತರಂತೆ ಪರಿಗಣಿಸಿರುವುದನ್ನು ಆಕ್ಷೇಪಿಸಿ ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಅವರು, 2013ರ ಲೋಕಪಾಲ್ ಕಾಯ್ದೆಯ 4ನೇ ಕಲಂ ಪ್ರಕಾರ, ವಿಶೇಷ ಆಹ್ವಾನಿತರು ಆಯ್ಕೆ ಸಮಿತಿಯಲ್ಲಿರುವುದಕ್ಕೆ ಅಥವಾ ಸಮಿತಿಯ ಸಭೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶವಿಲ್ಲ. ಹಾಗಾಗಿ ವಿಪಕ್ಷದ ನಾಯಕರಾದ ತಮ್ಮನ್ನು ಆಯ್ಕೆ ಸಮಿತಿಯ ಸದಸ್ಯರನ್ನಾಗಿ ಪರಿಗಣಿಸಬೇಕು. ಲೋಕಪಾಲ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ತಮ್ಮನ್ನು ವಿಪಕ್ಷಗಳ ನಾಯಕರೆಂದು ಪರಿಗಣಿಸಿ ಸಭೆಗೆ ಆಹ್ವಾನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ