ಟ್ವಿಟ್ಟರ್‌ ನಲ್ಲಿ ‘ಚೌಕಿದಾರ’ರಾದ ಕಮಲ ನಾಯಕರು!

Team Udayavani, Mar 17, 2019, 7:40 AM IST

chowkidar-17-3.jpg

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವಂತೆಯೇ ವಿವಿಧ ರಾಜಕೀಯ ಪಕ್ಷಗಳ ನಾಯಕರ ನಡುವೆ ಮಾತಿನ ಸಮರ, ವ್ಯಂಗ್ಯ, ಟೀಕೆಗಳೂ ಹೆಚ್ಚಾಗುತ್ತಿವೆ. ಈ ಹಿಂದೆ 2014ರಲ್ಲಿ ನರೇಂದ್ರ ಮೋದಿಯವರನ್ನು ‘ಚಾಯ್‌ ವಾಲಾ’ ಎಂದು ಟೀಕಿಸಿ ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿತ್ತು. ಇದೇ ಟೀಕೆಯನ್ನು ತನ್ನ ಪ್ರಮುಖ ಪ್ರಚಾರ ತಂತ್ರವಾಗಿ ಬಳಸಿಕೊಂಡಿದ್ದ ಬಿ.ಜೆ.ಪಿ.ಯ ಲೋಕ ಗೆಲುವಿಗೆ ‘ಚಾಯ್‌ ವಾಲಾ’ ಟೀಕೆಯೂ ಪ್ರಮುಖ ಕಾರಣವಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಈ ಬಾರಿಯೂ ಮರಳಿ ಅಧಿಕಾರಕ್ಕೇರಲು ಶತಾಯಗತಾಯ ಪ್ರಯತ್ನಿಸುತ್ತಿರುವ ಭಾರತೀಯ ಜನತಾ ಪಕ್ಷವು ಮುಖ್ಯವಾಗಿ ಯುವ ಹಾಗೂ ನಗರ ಪ್ರದೇಶದ ಮತದಾರರನ್ನು ಗಮನದಲ್ಲಿಟ್ಟುಕೊಂಡು ಹಲವಾರು ಮಾದರಿಯ ಪ್ರಚಾರ ತಂತ್ರಗಳನ್ನು ರೂಪಿಸಿಕೊಂಡಿದೆ. ಇದಕ್ಕೆ ಹೊಸ ಸೇರ್ಪಡೆ ‘ಚೌಕಿದಾರ್‌’ ಅಭಿಯಾನ.
 
ಏನಿದು ‘ಚೌಕಿದಾರ್‌’ ಅಭಿಯಾನ?
ಪ್ರಧಾನಿ ನರೆಂದ್ರ ಮೋದಿಯವರು ತಾವು ಅಧಿಕಾರ ವಹಿಸಿಕೊಂಡ ಪ್ರಾರಂಭದಲ್ಲಿ ತಮ್ಮನ್ನು ಈ ದೇಶದ ‘ಚೌಕಿದಾರ’ ಎಂದು ಕರೆದುಕೊಂಡಿದ್ದರು. ಮತ್ತೆ ಇತ್ತೀಚೆಗೆ ಪುಲ್ವಾಮ ಉಗ್ರದಾಳಿಗೆ ನಮ್ಮ ವಾಯುಸೇನೆ ಸೂಕ್ತ ಪ್ರತ್ಯುತ್ತರ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ಮತ್ತೆ ‘ಚೌಕಿದಾರ್‌’ ಪದವನ್ನು ಬಳಸುವ ಮೂಲಕ, ‘ಈ ದೇಶ ಚೌಕಿದಾರನ ಕೈಯಲ್ಲಿ ಸುರಕ್ಷಿತವಾಗಿದೆ…’ ಎಂದು ನುಡಿದಿದ್ದರು. ಆದರೆ ಪ್ರತಿಪಕ್ಷ ಕಾಂಗ್ರೆಸ್‌ ಮತ್ತು ಅದರ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಜಯ್‌ ಮಲ್ಯ, ನೀರವ್‌ ಮೋದಿ, ರಫೇಲ್‌ ಮುಂತಾದ ಪ್ರಕರಣಗಳನ್ನು ಉಲ್ಲೇಖೀಸಿ ಪ್ರಧಾನಿ ಅವರ ‘ಚೌಕಿದಾರ’ ಹೇಳಿಕೆಯನ್ನು ಟೀಕೆ ಮಾಡುತ್ತಲೇ ಬಂದಿದ್ದರು.

ಇದೀಗ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಈ ವಿಷಯವನ್ನೇ ಸವಾಲಾಗಿ ತೆಗೆದುಕೊಂಡಿರುವ ಭಾರತೀಯ ಜನತಾ ಪಕ್ಷವು ಇದೀಗ ಹೊಸ ಅಭಿಯಾನವೊಂದನ್ನು ಹುಟ್ಟುಹಾಕಿದ್ದು ಪ್ರಧಾನಿ ಮೋದಿಯವರ ‘ಚೌಕಿದಾರ’ ಹೇಳಿಕೆಯನ್ನು ಸರ್ವತ್ರ ಬೆಂಬಲಿಸಲು ಪಕ್ಷವು ನಿರ್ಧರಿಸಿದೆ. ಅದರಂತೆ ಪ್ರಧಾನಿ ಮೋದಿಯವರ ಕೆಲಸಗಳನ್ನು ಬೆಂಬಲಿಸುವವರೆಲ್ಲಾ ತಮ್ಮನ್ನು ತಾವು ‘ಚೌಕಿದಾರ’ರೆಂದು ಕರೆದುಕೊಳ್ಳುವಂಥೆ ಕರೆ ನೀಡಿದೆ. ಇಷ್ಟಕ್ಕೆ ಸುಮ್ಮನಾಗದ ಕೇಸರಿ ಪಕ್ಷದ ನಾಯಕರು ತಮ್ಮ ತಮ್ಮ ಟ್ವಿಟ್ಟರ್‌ ಅಕೌಂಟ್‌ ಗಳಲ್ಲಿ ತಮ್ಮ ಹೆಸರಿನ ಹಿಂದೆ ಚೌಕಿದಾರ ಎಂದು ಬರೆದುಕೊಂಡಿದ್ದಾರೆ. ಉದಾಹರಣೆಗೆ, ಪ್ರಧಾನಿ ಮೋದಿ ಅವರ ಅಧಿಕೃತ ಅಕೌಂಟ್‌ ಚೌಕಿದಾರ್‌ ನರೇಂದ್ರ ಮೋದಿ ಎಂದು ಬದಲಾಗಿದೆ, ಇನ್ನುಳಿದಂತೆ ಚೌಕಿದಾರ್‌ ಅಮಿತ್‌ ಶಾ, ಚೌಕಿದಾರ್‌ ಪಿಯೂಷ್‌ ಗೋಯಲ್‌, ಚೌಕಿದಾರ್‌ ಸ್ಮತಿ ಇರಾನಿ, ಚೌಕಿದಾರ್‌ ಡಾ. ಹರ್ಷ ವರ್ಧನ್‌, ಚೌಕಿದಾರ್‌ ರವಿಶಂಕರ್‌ ಪ್ರಸಾದ್‌, ಚೌಕಿದಾರ್‌ ಪ್ರಕಾಶ್‌ ಜಾವ್ಡೇಕರ್‌ ಹೀಗೆ ಕೇಂದ್ರದ  ಘಟಾನುಘಟಿ ಭಾ.ಜ.ಪ. ನಾಯಕರೆಲ್ಲರೂ ‘ಚೌಕಿದಾರ್‌’ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇಷ್ಟು ಮಾತ್ರವಲ್ಲದೇ ಚೌಕಿದಾರ್‌ ಇಂಡಿಯಾ ಎಂಬ ಹೊಸ ಟ್ವಿಟ್ಟರ್‌ ಅಕೌಂಟ್‌ ಅನ್ನೂ ಸಹ ಪ್ರಾರಂಭಿಸಲಾಗಿದೆ. ಮತ್ತು ಆ ಮೂಲಕ ದೇಶಾದ್ಯಂತ ನರೇಂದ್ರ ಮೋದಿ ಮತ್ತು ಎನ್‌.ಡಿ.ಎ. ಸರಕಾರದ ಕೆಲಸಗಳನ್ನು ಬೆಂಬಲಿಸುವವರೆಲ್ಲರೂ ‘ಚೌಕಿದಾರ್‌ ಅಭಿಯಾನ’ವನ್ನು ಬೆಂಬಲಿಸುವಂತೆ ಪಕ್ಷವು ಇದರಲ್ಲಿ ವಿನಂತಿ ಮಾಡಿಕೊಂಡಿದೆ. ‘ಬನ್ನಿ ಭಾರತೀಯರೇ.. ಇದು ಪ್ರತೀಯೊಬ್ಬ ಭಾರತೀಯನ ಹಕ್ಕು – ಮೈ ಭಿ ಚೌಕಿದಾರ್‌ ಮತ್ತು ಚೌಕಿದಾರ್‌ ಫಿರ್‌ ಸೇ ಎಂಬ ಹ್ಯಾಶ್‌ ಟ್ಯಾಗ್‌ ಗಳು ಕಳೆದ ಕೆಲವು ದಿನಗಳಿಂದ ಟ್ವಿಟ್ಟರ್‌ ನಲ್ಲಿ ಟ್ರೆಂಡಿಂಗ್‌ ಆಗುತ್ತಿದೆ.
ಒಟ್ಟಿನಲ್ಲಿ ಇದೀಗ ಪ್ರಧಾನಿ ಮೋದಿಯವರ ವಿರುದ್ಧ ಟೀಕೆಗಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕೆ ಮಾಡುವಾಗ ಪದೇ ಪದೇ ಕೆದಕುತ್ತಿದ್ದ ‘ಚೌಕಿದಾರ್‌’ ವಿಷಯವನ್ನೇ ಬಿ.ಜೆ.ಪಿ.ಯು ಸವಾಲಾಗಿ ಸ್ವೀಕರಿಸಿದ್ದು ಇದು ಮುಂಬರುವ ದಿನಗಳಲ್ಲಿ ಕೇಸರಿ ಪಕ್ಷಕ್ಕೆ ಯಾವ ರೀತಿಯಲ್ಲಿ ಪ್ರಯೋಜನವಾಗಲಿದೆ ಮತ್ತು ಕಾಂಗ್ರಸ್‌ ಗೆ ಹೇಗೆ ದುಬಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.