ನೀತಿ ಸಂಹಿತೆ ಉಲ್ಲಂಘನೆ ಆಗಿಲ್ಲ
Team Udayavani, Mar 22, 2019, 12:30 AM IST
ನವದೆಹಲಿ:ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾ.13ರಂದು ಚೆನ್ನೈನ ಸ್ಟೆಲ್ಲಾ ಮೆರೀಸ್ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜತೆಗೆ ನಡೆಸಿದ ಸಂವಾದ ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಎಂದು ತಮಿಳನಾಡು ಮುಖ್ಯ ಚುನಾವಣಾ ಅಧಿಕಾರಿ ಸತ್ಯಪ್ರಭ ಸಾಹೂ ಹೇಳಿದ್ದಾರೆ.
ಕಾರ್ಯಕ್ರಮದ ಬಗ್ಗೆ ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪರಿಶೀಲಿಸಿ ವರದಿ ನೀಡಿದ್ದಾರೆ ಎಂದಿದ್ದಾರೆ.