CONNECT WITH US  

ಪಿಎಂ, ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೇಪ್‌ ಸಂತ್ರಸ್ತೆ

ರಾಯ್‌ಬರೇಲಿ: ತನ್ನ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ಸಿಗದೆ ಬೇಸತ್ತಿರುವ ಉತ್ತರಪ್ರದೇಶದ ಅತ್ಯಾಚಾರ ಸಂತ್ರಸ್ತೆ ತಮಗಾದ ಅನ್ಯಾಯದ ಕುರಿತು ಪ್ರಧಾನಿ ಮೋದಿ ಮತ್ತು ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್‌ಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. 

ಆರೋಪಿಗಳಿಗೆ ಪ್ರಭಾವಿ ವ್ಯಕ್ತಿಗಳ ರಕ್ಷೆ ಇದೆ. ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಅತ್ಯಾಚಾರಿಗಳು ಕೇಸನ್ನು ವಾಪಸ್ಸು ಪಡೆಯುವಂತೆ ನನಗೆ ಬೆದರಿಕೆ ಒಡ್ಡುತ್ತಿದ್ದಾರೆ. 

ನನಗೆ ನ್ಯಾಯ ಒದಗಿಸಿ ಇಲ್ಲದಿದ್ದರೆ ನಾನು ಆತ್ಮಹತ್ಯೆಗೆ ಶರಣಾಗುತ್ತೇನೆ ಎಂದು ಮಹಿಳೆ ಪತ್ರದಲ್ಲಿ ಬರೆದಿದ್ದಾರೆ. ಪ್ರಕರಣ ಸಂಬಂಧ ಕಳೆದ ವರ್ಷದ ಮಾ.24ರಂದು ಇಬ್ಬರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಆದರೆ ಈವರೆಗೂ ಕ್ರಮ ಕೈಗೊಂಡಿಲ್ಲ.

Trending videos

Back to Top