CONNECT WITH US  

ಹಾಡಹಗಲೇ ಬಿಜೆಪಿ ಕಾರ್ಪೊರೇಟರ್ ಪತಿ ಕದಿರೇಶನ್ ಬರ್ಬರ ಹತ್ಯೆ

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶನ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬುಧವಾರ ಕಾಟನ್ ಪೇಟೆಯ ಅಂಜಿನಪ್ಪ ಗಾರ್ಡನ್ ವ್ಯಾಪ್ತಿಯಲ್ಲಿ ನಡೆದಿದೆ.

ಬಿಬಿಎಂಪಿ 138ನೇ ವಾರ್ಡ್ ನ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶನ್, ಇತ್ತೀಚೆಗೆ ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿಯೂ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Trending videos

Back to Top