ಮುಂಬಯಿ ಶೇರು 150 ಅಂಕಗಳ ಏರಿಕೆ, ರೂಪಾಯಿ ಚೇತರಿಕೆ
Team Udayavani, Sep 6, 2018, 10:38 AM IST
ಮುಂಬಯಿ : ಡಾಲರ್ ಎದುರು ರೂಪಾಯಿ ಚೇತರಿಕೆ, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ, ಏಶ್ಯನ್ ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 150 ಅಂಕಗಳ ಪುನರಾಗಮನವನ್ನು ದಾಖಲಿಸಿತು.
ಕಳೆದ ಆರು ದಿನಗಳ ನಿರಂತರ ಸೋಲಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 878.32 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಡಾಲರ್ ಎದುರು ರೂಪಾಯಿ ಇಂದು ಬೆಳಗ್ಗೆ 9 ಪೈಸೆಯಷ್ಟು ಚೇತರಿಸಿಕೊಂಡು 71.66 ರೂ. ಮಟ್ಟಕ್ಕೇರುವ ಮೂಲಕ ಶೇರು ಮಾರುಕಟ್ಟೆಯಲ್ಲಿ ಸಮಾಧಾನ ಮೂಡಿಸಿತು.
ಇಂದು ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್ 122.76 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು 38,141.07 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 27.80 ಅಂಕಗಳ ಮುನ್ನಡೆಯೊಂದಿಗೆ 11,504.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಕೋಲ್ ಇಂಡಿಯಾ, ಪವರ್ ಗ್ರಿಡ್, ಎಚ್ ಯು ಎಲ್, ಟಾಟಾ ಮೋಟರ್, ಸನ್ ಫಾರ್ಮಾ, ಕೋಟಕ್ ಬ್ಯಾಂಕ್, ಎಸ್ ಬ್ಯಾಂಕ್, ಏಶ್ಯನ್ ಪೇಂಟ್, ಟಾಟಾ ಸ್ಟೀಲ್, ವಿಪ್ರೋ, ಎಸ್ಬಿಐ,ಆರ್ಐಎಲ್ ಶೇರುಗಳು ಶೇ.1.46ರ ಏರಿಕೆಯನ್ನು ದಾಖಲಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್