CONNECT WITH US  

ಮೀರಾರೋಡ್‌ ಪಲಿಮಾರು ಮಠದಲ್ಲಿ ಆಷಾಢ ಏಕಾದಶಿ

ಮುಂಬಯಿ: ಮೀರಾರೋಡ್‌ ಪೂರ್ವದ ಪಲಿಮಾರು ಮಠದ ವತಿಯಿಂದ ಆಷಾಢ ಏಕಾದಶಿಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಠದ ಬಾಲಾಜಿ ಸನ್ನಿಧಿಯಲ್ಲಿ ಜು. 4ರಂದು ಜರಗಿತು.

ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌, ಮಠದ ಟ್ರಸ್ಟಿಗಳು ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾರ್ಮಿಕ ಕಾರ್ಯಕ್ರಮವಾಗಿ ವಿವಿಧ ಪೂಜೆ, ಏಕಾಹ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಮಠದ ಹಿರಿಯ ಪ್ರಬಂಧಕ ರಾಧಾಕೃಷ್ಣ ಭಟ್‌ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ಜರಗಿತು. ಭಜನ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಠದ ಟ್ರಸ್ಟಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Trending videos

Back to Top