ಪುಣೆ ಕನ್ನಡ ಸಂಘದ ಆಶ್ರಯದಲ್ಲಿ ಯಕ್ಷಗಾನ ಪ್ರದರ್ಶನ

Team Udayavani, Oct 3, 2018, 4:57 PM IST

0210mum08.jpg

ಪುಣೆ: ಯಕ್ಷಗಾನ ಅಂದರೆ ಧರ್ಮಕೋಶ, ನೀತಿಕೋಶ ಹಾಗೂ ತಣ್ತೀಕೋಶಗಳ ಆಗರವಾಗಿದೆ. ಧರ್ಮದ ಆಳವನ್ನು ಕಲಿಸುವುದೇ ಯಕ್ಷಗಾನ. ಇದರಲ್ಲಿರುವ ಭಾಷಾ ಶ್ರೀಮಂತಿಕೆ ವಿಶೇಷವಾಗಿದೆ. ಇದರಿಂದಾಗಿಯೇ ನಮ್ಮ ಕನ್ನಡ ಭಾಷೆ ಇಷ್ಟೊಂದು ಶ್ರೀಮಂತವಾಗಿದೆ. ಶಾಸ್ತ್ರೀಯ ಸಂಗೀತದ ಆಧಾರದಲ್ಲಿ ಹಾಡುವ ಭಾಗವತಿಕೆ, ಚೆಂಡೆ ಮದ್ದಲೆಗಳ ನಿನಾದದೊಂದಿಗೆ ನವರಸಭರಿತವಾದ ಯಕ್ಷಗಾನವನ್ನು ಆನಂದಿಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ ಎಂದು ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌ ನುಡಿದರು.

ಅವರು ಸೆ. 28 ರಂದು ಪುಣೆ ಕನ್ನಡ ಸಂಘದ ಡಾ|  ಶ್ಯಾಮರಾವ್‌ ಕಲ್ಮಾಡಿ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ಪುಣೆ ಕನ್ನಡ ಸಂಘವು ಹಮ್ಮಿಕೊಂಡ ಶ್ರೀ ಅಮೃತೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ ಕೋಟ ಇದರ ಸುಪ್ರಸಿದ್ಧ ಕಲಾವಿದರ ಕೂಡು ವಿಕೆಯಿಂದ ಚಂದ್ರಾವಳಿ ವಿಲಾಸ ಮತ್ತು ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನದ ಆರಂಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಕ್ಷಗಾನದ  ಕಲಾಭಿಮಾನಿಗಳಿಗೆ ಬಡಗುತಿಟ್ಟಿನ  ಯಕ್ಷಗಾನದ ಬಗ್ಗೆ ತಿಳಿದುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ತೆಂಕು ತಿಟ್ಟಿನಿಂದ ಸ್ವಲ್ಪ ಭಿನ್ನ ರೀತಿಯಲ್ಲಿ ಪ್ರಸ್ತುತಗೊಳ್ಳುವ ಬಡಗುತಿಟ್ಟಿನ ಯಕ್ಷಗಾನ ಪ್ರದರ್ಶನ ವನ್ನು ಕಲಾಭಿಮಾನಿಗಳ ಅಪೇಕ್ಷೆಯಂತೆ ಆಯೋಜಿಸಲಾಗಿದೆ ಎಂದರು.

ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ ಅವರು ಮಾತನಾಡಿ, ಬಾಲ್ಯದಲ್ಲಿ ಯಕ್ಷ ಗಾನವನ್ನು ನೋಡಿ ಆನಂದಿಸುತ್ತಿದ್ದ ದಿನಗಳು ಇಂದು ನೆನಪಾಗುತ್ತಿದೆ. ಬಡಗುತಿಟ್ಟಿನ ಯಕ್ಷಗಾನ ಪ್ರದರ್ಶನದ ರಸಾಸ್ವಾದವನ್ನು ಅನುಭವಿಸಲು ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕನ್ನಡ ಸಂಘದಿಂದ ಈ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿಯ ಪ್ರಧಾನ ಕಾರ್ಯದರ್ಶಿ ನಾಟ್ಯಗುರು ಮದಂಗಲ್ಲು ಆನಂದ ಭಟ್‌, ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ  ಕಟ್ಟಿಂಗೇರಿಮನೆ ಸುಭಾಶ್ಚಂದ್ರ ಹೆಗ್ಡೆ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಜ್‌ ಇದರ ಅಧ್ಯಕ್ಷರಾದ ಸುಭಾಷ್‌ ಶೆಟ್ಟಿ, ಪುಣೆ ಕನ್ನಡ ಸಂಘದ ಜನ ಸಂಪರ್ಕಾಧಿಕಾರಿ ರಾಮದಾಸ ಆಚಾರ್ಯ ಉಪಸ್ಥಿತರಿದ್ದರು.

ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಮುಂಬಯಿ ಇದರ 12 ನೇ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಮೃತೇಶ್ವರಿ ಮೇಳ ಕೋಟ ಕಲಾವಿದರಿಂದ ಸುರೇಶ ಬರ್ಕಳಮಕ್ಕಿ ಇವರು ಪ್ರದರ್ಶನವನ್ನು ಕನ್ನಡ ಸಂಘ ಪುಣೆ ಇದರ ಮೂಲಕ  ಸಂಯೋಜಿಸಿದ್ದರು. ಈ ಸಂದರ್ಭ ಬಡಗುತಿಟ್ಟಿನ ಖ್ಯಾತ ಭಾಗವತರಾದ ಸುರೇಶ ಶೆಟ್ಟಿ ಶಂಕರನಾರಾಯಣ ಇವರನ್ನು ಶಾಲು ಹೊದಿಸಿ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು.

ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಭಾಸ್ಕರ್‌ ಶೆಟ್ಟಿ ಪಲ್ಲವಿ, ಪುರಂದರ ಪೂಜಾರಿ, ರಕ್ಷಿತ್‌ ಶೆಟ್ಟಿ, ಜಯಕರ ಶೆಟ್ಟಿ ಕೊಂಡಳ್ಳಿ ಉಪಸ್ಥಿತರಿದ್ದರು. ಸುರೇಶ್‌ ಶೆಟ್ಟಿ, ಭಾಸ್ಕರ ಕೊಠಾರಿ, ಪ್ರಕಾಶ್‌ ಶೆಟ್ಟಿ ಸಹಕರಿಸಿದರು.
ಅನಂತರ ಚಂದ್ರಾವಳಿ ವಿಲಾಸ ಮತ್ತು ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನಗೊಂಡಿತು. ಪ್ರದರ್ಶನದಲ್ಲಿ ಭಾಗವತರಾಗಿ ಸುರೇಶ ಶೆಟ್ಟಿ ಶಂಕರನಾರಾಯಣ ಭಾಗವಹಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ತುಳು- ಕನ್ನಡಿಗರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.