ಬಿಲ್ಲವ ಭವನದಲ್ಲಿ ಯಶಸ್ವಿವಧು-ವರ ಹೊಂದಾಣಿಕೆ ಕಾರ್ಯಕ್ರಮ

Team Udayavani, Nov 22, 2017, 11:45 AM IST

21-Mum06a.jpg

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಮತ್ತು ಬಿಲ್ಲವ ಅಸೋಸಿಯೇಶನ್‌ ಬೆಂಗಳೂರು ಇವರ ಜಂಟಿ ಆಯೋಜನೆಯಲ್ಲಿ ಮುಂಬಯಿ ಉಪ ನಗರದಲ್ಲಿ ವಾಸಿಸುವ ಬಿಲ್ಲವ ಸಮುದಾಯದ ಸಂಭಾವ್ಯ ವಧು- ವರ ಹೊಂದಾಣಿಕೆ ಕಾರ್ಯಕ್ರಮವು ನ. 19ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಯಶಸ್ವಿಯಾಗಿ ಜರಗಿತು.

ಪ್ರಾರಂಭದಲ್ಲಿ ಬಿಲ್ಲವರ ಅಸೋಸಿಯೇಶನ್‌ಅಧ್ಯಕ್ಷ  ನಿತ್ಯಾನಂದ ಡಿ. ಕೋಟ್ಯಾನ್‌ ಮತ್ತು ಬಿಲ್ಲವರ ಅಸೋಸಿಯೇಶನ್‌ ಬೆಂಗಳೂರು ಇದರ ಅಧ್ಯಕ್ಷರಾದ ಎಂ. ವೇದ್‌ಕುಮಾರ್‌ ಅವರೊಂದಿಗೆ  ಅಸೋಸಿಯೇಶನ್‌ನ ನಿಕಟಪೂರ್ವ ಅಧ್ಯಕ್ಷ ಎಲ್‌. ವಿ. ಅಮೀನ್‌ ದಂಪತಿ, ಹಿರಿಯರಾದ ವಾಮನ್‌ ಡಿ. ಪೂಜಾರಿ ದಂಪತಿ,  ಮಾಜಿ ಕೋಶಾಧಿಕಾರಿ ಎನ್‌. ಎಂ.  ಸನಿಲ್‌ ದಂಪತಿ ಮತ್ತು ಬೇಬಿ ಶ್ಯಾಮ ಕುಕ್ಯಾನ್‌ ದಂಪತಿ, ಭಾಸ್ಕರ್‌ ಸಾಲ್ಯಾನ್‌ ಇವರು ದೀಪ ಪ್ರಜ್ವಲಿಸಿ ಹೊಂದಾಣಿಕೆಯ ಒಲುಮೆಗೆ ಚಾಲನೆ ನೀಡಿದರು.

ಜ್ಯೋತಿ ಸುವರ್ಣ ಅವರು ಪ್ರಾರ್ಥನೆಗೈದರು. ಈ ಕಾರ್ಯಕ್ರಮಕ್ಕೆ ಸಂಭಾವ್ಯ ವಧು-ವರರು ಬಿಲ್ಲವ ಭವನದಲ್ಲಿ ಉಪಸ್ಥಿತರಿದ್ದು ಸಭಾಭವನ ತುಂಬಿ ತುಳುಕುತ್ತಿತ್ತು. ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,  ನಿಮ್ಮೆಲ್ಲರ ಉಪಸ್ಥಿತಿ ನಮ್ಮ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ. ನಮ್ಮ ಊಹೆಗೂ ಮೀರಿ ನೀವಿಲ್ಲಿ ನೆರೆದಿದ್ದೀರಿ, ಅಸೋಸಿಯೇಶನ್‌ ಚರಿತ್ರೆಯಲ್ಲಿ ಇಂತಹ ಬಹುಸಂಖ್ಯೆಯ ವಿವಾಹ ಯೋಗ್ಯ ಅಭ್ಯರ್ಥಿಗಳು ಒಂದೆಡೆ ಸೇರಿದ್ದು ಸಂಸ್ಥೆಯ ಮೇಲಿನ ಪ್ರೀತಿ ಮತ್ತು ಅಭಿಮಾನದ ದ್ಯೋತಕವಾಗಿದೆ. ಈ ಕಾರ್ಯಕ್ರಮವು ಕಟ್ಟು-ನಿಟ್ಟಾದ ಕ್ರಮ ನಿಬಂಧನೆಗಳು ಮತ್ತು ಪಾರದರ್ಶಕತೆಯಿಂದ ನಡೆಯಲಿದೆ ಎಂದು  ತಿಳಿಸಿ ವಧು-ವರರ ವಿವರವನ್ನು ನಾಲ್ಕು ವಿಭಾಗವಾಗಿ ವಿಂಗಡಿಸಿರುವೆ. ಅದನ್ನು ವಧು-ವರರು ಬರೆದಿಟ್ಟುಕೊಂಡು ಹೆಚ್ಚಿನ ಮಾಹಿತಿಯನ್ನು ಸಮಾಲೋಚನ ಕಕ್ಷೆಯಲ್ಲಿ ಪಡೆದುಕೊಳ್ಳಬಹುದು ಎಂದರು.

ಬೆಂಗಳೂರಿನ ವೇದ್‌ಕುಮಾರ್‌ ಅವರು ಮಾತನಾಡಿ, ಈ ವಧು-ವರ ಹೊಂದಾಣಿಕೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ  ಸಂಘಟಿಸು
ತ್ತಿದ್ದು, ಸಮಾಜ ಬಾಂಧವರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಈ ಯೋಜನೆಯನ್ನು ಮಂಗಳೂರು, ಉಡುಪಿ, ಕುಂದಾಪುರ, ಬೆಳ್ತಂಗಡಿ ಮುಂತಾದ ಕಡೆಗಳಲ್ಲಿ ಈಗಾಗಲೇ ನಡೆಸಿ ಸಮಾಜ ಬಾಂಧವರ ಶ್ಲಾಘನೆಯನ್ನು ಪಡೆದು ಅನೇಕ ವೈವಾಹಿಕ ಸಂಬಂಧಗಳನ್ನು ಜೋಡಿಸಿದ್ದೇವೆ. ಇಲ್ಲಿಯೂ ನೀವು ಇದರ ಪ್ರಯೋಜನವನ್ನು ಪಡೆಯಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಸುಮಾರು 350ಕ್ಕೂ ಮಿಕ್ಕಿ ಸಂಭಾವ್ಯ ವಧು-ವರರು ಭಾಗವಹಿಸಿದ್ದರು. ಪವರ್‌ ಪಾಯಿಂಟ್‌ ಮುಖೇನ ಪ್ರತಿಯೊಬ್ಬ ಅಭ್ಯರ್ಥಿಯ ವೈಯಕ್ತಿಕ ವಿವರ, ಮಾಹಿತಿಗಳನ್ನು ಸಚಿತ್ರದೊಂದಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಪ್ರದರ್ಶಿಸಲಾಯಿತು. ಬೆಂಗಳೂರಿನಿಂದ ಆಗಮಿಸಿದ ಬಿಲ್ಲವ ಅಸೋಸಿಯೇಶನ್‌ನ ಪದಾಧಿಕಾರಿಗಳನ್ನು  ಈ ಸಂದರ್ಭದಲ್ಲಿ ಶಾಲು ಹಾಗೂ ಪುಷ್ಪ ಗೌರವ ನೀಡಿ ಗೌರವಿಸಲಾಯಿತು. ಹರೀಶ್‌ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಪ್ರಧಾನ  ಕಾರ್ಯದರ್ಶಿ ಧರ್ಮಪಾಲ್‌ ಜಿ. ಅಂಚನ್‌ ಸ್ವಾಗತಿಸಿ,  ವಂದಿಸಿದರು. ಕೊನೆಯಲ್ಲಿ  ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.