ಬಂಟರ ಸಂಘ ಉನ್ನತ ಶಿಕ್ಷಣ ಸಂಸ್ಥೆ:ಆಡಳಿತ ಕಚೇರಿ ಉದ್ಘಾಟನೆ

Team Udayavani, Dec 12, 2017, 11:39 AM IST

10-Mum02a.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಶಿಮನ್‌ಮೋಹನ್‌ ಶೆಟ್ಟಿ ಉನ್ನತ ಶಿಕ್ಷಣ ಸಂಕೀರ್ಣದಲ್ಲಿರುವ ವಿವಿಧ ಕಾಲೇಜುಗಳ ಕಾರ್ಯಯೋಜನೆಗಳು ಹೊಸತನದ ನಕ್ಷೆ ರಚನಾ ಕ್ರಮದೊಂದಿಗೆ ಹಾಗೂ ಉತ್ತಮ ಗುಣಮಟ್ಟದೊಂದಿಗೆ ಅಂತಿಮ ಹಂತವನ್ನು ತಲುಪಿದ್ದು, ಆ ಪ್ರಯುಕ್ತ ಡಿ. 8ರಂದು ಬೆಳಗ್ಗೆ ಗಣಹೋಮ ಪೂಜೆ ನೆರವೇರಿದ ಬಳಿಕ ಉನ್ನತ ಶಿಕ್ಷಣ ಕಾಲೇಜುಗಳ ನೂತನ ಪ್ರಧಾನ ಆಡಳಿತ ಕಚೇರಿಯನ್ನು ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಸಂಘದ ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರು ಜ್ಯೋತಿ ಪ್ರಜ್ವಲಿಸಿ, ರಿಬ್ಬನ್‌ ಕತ್ತರಿಸುವ ಮೂಲಕ ಉದ್ಘಾಟಿಸಿ, ಮುಖದ್ವಾರದಲ್ಲಿರುವ ನೂತನ ನಾಮಫಲಕವನ್ನು ಅನಾವರಣಗೊಳಿಸಿದರು.

ಉನ್ನತ ಶಿಕ್ಷಣ ಸಂಕೀರ್ಣದ ತುಂಗಾ ಟ್ರೈನಿಂಗ್‌ ರೆಸ್ಟೋರೆಂಟ್‌ನಲ್ಲಿ ಜರಗಿದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು. ಸಂಘದ ಉನ್ನತ ಶಿಕ್ಷಣ ಯೋಜನೆಗಾಗಿ ಆರಂಭದಿಂದ ಇಂದಿನವರೆಗೂ ಅಪಾರ ಸೇವೆಗೈದಿರುವ, ಸೇವೆಗೈಯುತ್ತಿರುವ ಉನ್ನತ ಶಿಕ್ಷಣ ಪದಾಧಿಕಾರಿಗಳು, ಸಮಿತಿಯ ಸದಸ್ಯರು, ಸಂಘದ ಪದಾಧಿಕಾರಿಗಳು ಹಾಗೂ ಮಹಾದಾನಿಗಳ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ. ಯಾವುದೇ ಯೋಜನೆಯು ಯಶಸ್ವಿಯಾಗಬೇಕಾದರೆ ಸೇವಾನಿರತ ಸದಸ್ಯರ ಒಗ್ಗಟ್ಟು, ಸಂಕಲ್ಪ ಶಕ್ತಿ ಹಾಗೂ ಪರಿಶ್ರಮ ಅಗತ್ಯ. ಈ  ಎಲ್ಲಾ ಗುಣಗಳು ಇಲ್ಲಿ ಮೈಗೂಡಿಕೊಂಡಿರುವುದರಿಂದಲೇ ಉನ್ನತ ಶಿಕ್ಷಣ ಯೋಜನೆ ಸಫಲಗೊಂಡಿದೆ. ಸಂಘದ ಉನ್ನತ ಶಿಕ್ಷಣ ಸಂಸ್ಥೆಯು ರಾಜ್ಯದಲ್ಲೇ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆ ಎಂಬ ಹೆಸರನ್ನು ಗಳಿಸಿದೆ. ಪರಿಶ್ರಮ ಪಟ್ಟವರ ಶ್ರಮ ಸಾರ್ಥಕವಾಗಿದೆ. ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದರು.

ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರು ಮಾತನಾಡಿ, ಸಂಘದ ಈ ಯೋಜನೆಗೆ ಸದಾ ಸಹಕಾರ ನೀಡುತ್ತಿರುವ ಸಂಸದ ಗೋಪಾಲ್‌ ಶೆಟ್ಟಿ, ಡಾ| ಪಿ. ವಿ. ಶೆಟ್ಟಿ, ರವಿ ಶೆಟ್ಟಿ, ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಅಧ್ಯಕ್ಷರ ಸಹಕಾರದಿಂದಾಗಿ ಅಂತಿಮ ಹಂತದ ಕಾಮಗಾರಿಗೆ ಹೆಚ್ಚುವರಿ ಎಫ್‌ಎಸ್‌ಐ ಅನುಮತಿ ದೊರೆಯಿದೆ. ಕಳೆದ ಮೂರು ವರ್ಷಗಳಲ್ಲಿ ಹೆಚ್ಚುವರಿ ಮಹಡಿಗಳಲ್ಲಾದ ಕಾಮಗಾರಿ, ನವೀಕೃತ ಸೌಲಭ್ಯಗಳು, ಕಾಲೇಜು ವಿಭಾಗಗಳ ಹೆಚ್ಚಳ, ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ, ಅಕಾಡೆಮಿಯ ಜೊತೆಗಿನ ಸಂಬಂಧ, ಕಾನೂನು ಬಳಸುವಿಕೆ, ವೆಂಡರ್‌ಗಳ ಆಯ್ಕೆ, ಜಮೀನು ಸಂಬಂಧಿ ವ್ಯಾಜ್ಯಗಳ ಮುಕ್ತಾರ, ವಿಭಾಗಗಳ ಕೇಂದ್ರೀಕರಣ ಮೊದಲಾದ ವಿಷಯಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಇದೇ ಸಂದರ್ಭದಲ್ಲಿ ಬಂಟರ ಸಂಘದನೂತನ ಅಧ್ಯಕ್ಷರಾಗಿ ನೇಮಕಗೊಂಡ ಪದ್ಮನಾಭ ಎಸ್‌. ಪಯ್ಯಡೆ ಹಾಗೂ ಪದಾಧಿಕಾರಿಗಳನ್ನು ಜತೆಗೆ ಉನ್ನತ ಶಿಕ್ಷಣ ಕಾಲೇಜುಗಳ ಟೈಟಲ್‌ ಡೋನರ್ಗಳಾದ ಅಣ್ಣಯ ಶೆಟ್ಟಿ, ಮುಂಡಪ್ಪ ಎಸ್‌. ಪಯ್ಯಡೆ, ಉಮಾ ಕೃಷ್ಣ ಶೆಟ್ಟಿ, ಡಾ| ಪಿ. ವಿ. ಶೆಟ್ಟಿ, ಗೌರವ್‌ ಆರ್‌. ಪಯ್ಯಡೆ ಅವರನ್ನು ಗೌರವಿಸಲಾಯಿತು.

ಆರಂಭದಲ್ಲಿ ಜರಗಿದ ಗಣ ಹೋಮ ಪೂಜೆಯಲ್ಲಿ ಉನ್ನತ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ ಮತ್ತು ಭಾರತಿ ಆರ್‌. ಶೆಟ್ಟಿ ದಂಪತಿ ಪಾಲ್ಗೊಂಡಿದ್ದರು. ಬಳಿಕ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ  ಪ್ರಸಾದ ಸ್ವೀಕರಿಸಿದರು.

ವೇದಿಕೆಯಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ,ಉನ್ನತ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ. ಸಿಎ ಸತೀಶ್‌ ಎನ್‌.ಶೆಟ್ಟಿ. ಕಾರ್ಯದರ್ಶಿ ಸಿಎ ಹರೀಶ್‌ ಹೆಗ್ಡೆ, ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ ಉಪಸ್ಥಿತರಿದ್ದರು. ಸಿಎ ಹರೀಶ್‌ ಹೆಗ್ಡೆ ವಂದಿಸಿದರು. ಸಂಘದ ಮಾಜಿ ಅಧ್ಯಕ್ಷರು, ವಿಶ್ವಸ್ತರು, ಉನ್ನತ ಶಿಕ್ಷಣ ಸಮಿತಿಯ ಸದಸ್ಯರು, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.