CONNECT WITH US  

ಬಿಲ್ಲವರ ಅಸೋಸಿಯೇಶನ್‌ ನಲಸೋಪರ-ವಿರಾರ್‌ : ಪದಾಧಿಕಾರಿಗಳ ಪದಗ್ರಹಣ

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಇದರ ನಲಸೋಪರ-ವಿರಾರ್‌ ಸ್ಥಳೀಯ ಕಚೇರಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚೆಗೆ ನಲಸೋಪರ ಪೂರ್ವದ ಗಣಪತಿ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಅವರು ಮಾತನಾಡಿ, ಅಸೋಸಿಯೇಶನ್‌ನ ಸಮಗ್ರ ಯೋಜನೆಗಳನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈ ಎಲ್ಲಾ ಯೋಜನೆಗಳು ನಮ್ಮ ಸಮಾಜದ ನಾಯಕರಾದ ಜಯ ಸಿ. ಸುವರ್ಣರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ನಾವೆಲ್ಲರೂ ಸಮಾಜದ ಅಭಿವೃದ್ಧಿಗೆ ದುಡಿಯೋಣ. ನಮಗೆ ಜಯ ಸಿ. ಸುವರ್ಣರು ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸೋಣ ಎಂದರು.

ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಅವರು ನೂತನ ಪದಾಧಿಕಾರಿಗಳ ಹೆಸರನ್ನು ಘೋಷಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾಗಿ ದಯಾನಂದ ಜಿ. ಬೋಂಟ್ರಾ ಅವರನ್ನು ಸರ್ವಾನುಮತದಿಂದ ನೇಮಿಸಲಾಯಿತು. ಉಪ ಕಾರ್ಯಾಧ್ಯಕ್ಷರಾಗಿ ಕಮಲಾಕರ್‌ ಸುವರ್ಣ ಮತ್ತು ಪ್ರಮೋದ್‌ ಸುವರ್ಣ, ಗೌರವ ಕಾರ್ಯದರ್ಶಿಯಾಗಿ ಮಲ್ಲಿಕಾ ಆರ್‌. ಪೂಜಾರಿ, ಜತೆ ಕಾರ್ಯದರ್ಶಿಯಾಗಿ ರಘುರಾಮ್‌ ಎ. ಸಾಲ್ಯಾನ್‌, ಗೌರವ ಕೋಶಾಧಿಕಾರಿಯಾಗಿ ಜಗದೀಶ್‌ ಕೋಟ್ಯಾನ್‌, ಜತೆ ಕೋಶಾಧಿಕಾರಿಯಾಗಿ ಕಾರ್ತಿಕ್‌ ಕೆ. ಪೂಜಾರಿ ಅವರನ್ನು ನೇಮಿಸಲಾಯಿತು.

ನಿರ್ಗಮನ ಕಾರ್ಯಾಧ್ಯಕ್ಷ ಕೋಡಿ ಗೋಪಾಲ ಪೂಜಾರಿ ಅವರು ನೂತನ ಸಮಿತಿಗೆ ಶುಭಹಾರೈಸಿ, ತನ್ನ ಕಾರ್ಯಾವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ ತಾನು ಇನ್ನು 

ಮುಂದೆಯೂ ಈ ಸಮಿತಿಗೆ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಘೋಷಿಸಿ ದರು. ಗತ ವಾರ್ಷಿಕ ವರದಿಯನ್ನು ಗೌರವ ಕಾರ್ಯದರ್ಶಿ ಮಲ್ಲಿಕಾ ಆರ್‌. ಪೂಜಾರಿ ಅವರು ವಾಚಿಸಿದರು.

ವೇದಿಕೆಯಲ್ಲಿ ಅಸೋಸಿಯೇಶನ್‌ ಉಪಾಧ್ಯಕ್ಷರುಗಳಾದ ಶಂಕರ್‌ ಡಿ. ಪೂಜಾರಿ, ಹರೀಶ್‌ ಜಿ. ಅಮೀನ್‌, ದಯಾನಂದ ಪೂಜಾರಿ, ಶ್ರೀನಿವಾಸ್‌ ಆರ್‌. ಕರ್ಕೇರ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್‌ ಜೆ. ಬಂಗೇರ, ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಜಗದೀಶ್‌ ಅಮೀನ್‌, ನಿರ್ಗಮನ ಕಾರ್ಯಾಧ್ಯಕ್ಷ ಕೋಡಿ ಗೋಪಾಲ್‌ ಪೂಜಾರಿ, ಕಾರ್ಯಾಧ್ಯಕ್ಷ ದಯಾನಂದ ಬೋಂಟ್ರಾ, ಉಪ ಕಾರ್ಯಾಧ್ಯಕ್ಷ ಕಮಲಾಕರ ಆರ್‌. ಸುವರ್ಣ, ಕೋಶಾಧಿಕಾರಿ ಮಲ್ಲಿಕಾ ಆರ್‌. ಪೂಜಾರಿ ಹಾಗೂ ಕೇಂದ್ರ ಕಚೇರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಿಳಾ ಸದಸ್ಯೆಯರು ಪ್ರಾರ್ಥನೆಗೈದರು. ಗೌರವ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಆರ್‌. ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜತೆ ಕಾರ್ಯದರ್ಶಿ ರಘುರಾಮ ಎ. ಸಾಲ್ಯಾನ್‌ ವಂದಿಸಿದರು. ದೇವಕಿ ಸದಾಶಿವ ಕರ್ಕೇರ ಅವರ ವತಿಯಿಂದ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
 

Trending videos

Back to Top