CONNECT WITH US  

ಕರ್ನಾಟಕ ಸಂಘ ಮುಂಬಯಿ: ಯಕ್ಷಗಾನ ತಾಳಮದ್ದಳೆ

ಮುಂಬಯಿ: ಕರ್ನಾಟಕ ಸಂಘ ಮುಂಬಯಿ ಆಯೋಜನೆಯಲ್ಲಿ ಕಲಾ ಪ್ರಕಾಶ ಪ್ರತಿಷ್ಠಾನ ಮುಂಬಯಿ ಇವರು ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಸೆ. 3ರಂದು ಮಾಟುಂಗ ಪೂರ್ವದ ಮೈಸೂರು ಅಸೋಸಿಯೇಶನ್‌ ಸಭಾಗೃಹದಲ್ಲಿ ವಾಲಿಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಿತು.

ಪ್ರಾರಂಭದಲ್ಲಿ ಕರ್ನಾಟಕ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಕಲಾ ಪ್ರಕಾಶ ಪ್ರತಿಷ್ಠಾನದ ಸಂಚಾಲಕರಾದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಮತ್ತು ಪ್ರಸಿದ್ಧ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಹಾಗೂ ಇತರ ಕಲಾವಿದರನ್ನು ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿದರು.
ಮಾಜಿ ಕಾರ್ಯದರ್ಶಿ ಓಂದಾಸ್‌ ಕಣ್ಣಂಗಾರ್‌ ಅವರು ಕಲಾವಿದರನ್ನು ಪರಿಚಯಿಸಿ ಕರ್ನಾಟಕ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿ, ಕರ್ನಾಟಕ ಸಂಘವು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದು, ಯಕ್ಷಗಾನದಂತಹ ಕಾರ್ಯಕ್ರಮಗಳಿಗೆ ಸಂಘದ ಬೆಂಬಲ ಸದಾಯಿದೆ ಎಂದರು.

ಇದೇ ಸಂದರ್ಭದಲ್ಲಿ ಡಾ| ಭರತ್‌ ಕುಮಾರ್‌ ಪೊಲಿಪು ಅವರು ಮಾತನಾಡಿ,   ಸೆ. 8 ಮತ್ತು ಸೆ. 9 ರಂದು ಕುವೆಂಪು  ಸ್ಮಾರಕ ಏಕಾಂಕ ನಾಟಕ ಸ್ಪರ್ಧೆಯು ಕರ್ನಾಟಕ ಸಂಘದ ವತಿಯಿಂದ ಮೈಸೂರು ಅಸೋಸಿಯೇಶನ್‌ನಲ್ಲಿ ಜರಗಲಿದೆ. ಇದರಲ್ಲಿ ಮುಂಬಯಿಯ ಹಾಗೂ ಹೊರನಾಡಿನ ಪ್ರಸಿದ್ಧ ತಂಡಗಳು ಭಾಗವಹಿಸಲಿವೆ. ಅತ್ಯುತ್ತಮ ನಾಟಕಗಳು ಇಲ್ಲಿ ಪ್ರದರ್ಶನಗೊಳ್ಳಲಿದ್ದು, ಕಲಾರಸಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಲಾಪ್ರಕಾಶನ ಪ್ರತಿಷ್ಠಾನದ ವತಿಯಿಂದ ಪ್ರಕಾಶ್‌ ಶೆಟ್ಟಿ ಸುರತ್ಕಲ್‌ ಅವರು ಡಾ| ಭರತ್‌ ಕುಮಾರ್‌ ಪೊಲಿಪು ಹಾಗೂ ಓಂದಾಸ್‌ ಕಣ್ಣಂಗಾರ್‌ ಅವರನ್ನು ಶಾಲು ಹೊದೆಸಿ ಗೌರವಿಸಿದರು. ಆನಂತರ ನಡೆದ ವಾಲಿಮೋಕ್ಷ ತಾಳಮದ್ದಳೆಯಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ ಗಣೇಶ್‌ ಮಯ್ಯ ವರ್ಕಾಡಿ ಸಹಕರಿಸಿದರು.

ಅರ್ಥಧಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್‌, ಜಬ್ಟಾರ್‌ ಸಮೋ ಸಂಪಾಜೆ, ಗಣೇಶ್‌ ಶೆಟ್ಟಿ ಕನ್ನಡಿಕಟ್ಟೆ, ವಿಜಯ ಆಚಾರ್ಯ ಹೊಸಬೆಟ್ಟು, ಸುರೇಶ್‌ ಶೆಟ್ಟಿ ನಂದೊÅಳ್ಳಿ, ಅತಿಥಿ ಭಾಗವತರಾಗಿ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಮೊದಲಾದವರು ಭಾಗವಹಿಸಿದರು. ಕಲಾಭಿಮಾನಿಗಳ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 
ಚಿತ್ರ-ವರದಿ : ಸುಭಾಷ್‌ ಶಿರಿಯಾ

Trending videos

Back to Top