ಬಿಲ್ಲವ ಸೇವಾ ಸಂಘ ಕುಂದಾಪುರ: 30ನೇ ವಾರ್ಷಿಕೋತ್ಸವ ಸಮಾರಂಭ


Team Udayavani, Sep 11, 2018, 4:40 PM IST

95.jpg

ಮುಂಬಯಿ: ಸಮಾಜ ಬಾಂಧವರು ಎಲ್ಲಾ ಕಾರ್ಯಗಳಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದಾಗ ನಮಗೆ ಇನ್ನಷ್ಟು ಸಮಾಜಪರ ಸೇವೆ ಮಾಡಲು ಉತ್ತೇಜನ ಸಿಗುತ್ತದೆ. ನಮ್ಮ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ ಆ ಮೂಲಕ ಸಮಾಜ ಬಾಂಧವರ ಸೇವೆಯನ್ನು ಮಾಡಬೇಕು. ಇದಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದು ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ ನೂತನ ಅಧ್ಯಕ್ಷ ಸೂರ್ಯ ಎಸ್‌. ಪೂಜಾರಿ ಅವರು ನುಡಿದರು.

ವಡಾಲ ಪಶ್ಚಿಮದ ಎನ್‌ಕೆಇಎಸ್‌ ಶಿಕ್ಷಣ ಸಂಕುಲದ ಸಭಾಗೃಹದಲ್ಲಿ ಜರಗಿದ ಬಿಲ್ಲವ ಸೇವಾ ಸಂಘ ಕುಂದಾಪುರ ಇದರ 30ನೇ ವಾರ್ಷಿ ಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವೆಲ್ಲರೂ ಒಂದಾಗಿ ಸಂಸ್ಥೆಯನ್ನು ಇನ್ನಷ್ಟು ಬಲಪಡಿಸೋಣ ಎಂದು ಕರೆನೀಡಿದರು.

ಸಹಕಾರ ಸದಾಯಿದೆ 
ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಉದ್ಯಮಿ, ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಇದರ ನಿರ್ದೇಶಕ ಭರತ್‌ ಎಸ್‌. ಪೂಜಾರಿ ಅವರು, ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಂತೋಷವಾಗುತ್ತಿದೆ. ಸಮಾಜಪರ ಕಾರ್ಯಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದರು.

ಅತಿಥಿಯಾಗಿ ಉಪಸ್ಥಿತರಿದ್ದ ಸಂಘದ ಗೌರವಾಧ್ಯಕ್ಷ ಸುರೇಶ್‌ ಎಸ್‌. ಪೂಜಾರಿ ಇವರು ಮಾತನಾಡಿ, ಸಮಾಜಪರ ಕಾರ್ಯಗಳನ್ನು ಮಾಡುತ್ತಾ ಹೊಸ ಸಮಿತಿಯು ಸಮಾಜದ ಜನರ ಒಳಿತಿಗಾಗಿ ಶ್ರಮಿಸಬೇಕು. ಒಳ್ಳೆಯ ಕಾರ್ಯಗಳಿಂದಾಗಿ ಸಂಘವು ಬಲ ಗೊಳ್ಳುತ್ತದೆ. ಸಮಾಜ ಬಾಂಧವರು ಸಂಘದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಡಾ| ಶೇಖರ್‌ ಹೆಮ್ಮಾಡಿ ಅವರನ್ನು ಅವರ ಸಮಾಜ ಸೇವೆಗಾಗಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು. ವೇದಿಕೆಯಲ್ಲಿ ಅತಿಥಿಗಳಾಗಿ ಉದ್ಯಮಿ ಪರಮೇಶ್ವರ್‌ ಪೂಜಾರಿ, ಮಹೇಶ್‌ ಪೂಜಾರಿ, ಜಯ ಸೂರ್ಯ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಎಸ್‌. ಟಿ. ಪೂಜಾರಿ, ನ್ಯಾಯವಾದಿ ಆನಂದ್‌ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್‌ ಬಿಲ್ಲವ, ಸಂಘದ ಎಸ್‌. ಕೆ. ಪೂಜಾರಿ, ಗೌರವ ಕಾರ್ಯದರ್ಶಿ ಶಂಕರ್‌ ಎಂ. ಪೂಜಾರಿ, ಉಪಾಧ್ಯಕ್ಷ ಎನ್‌. ಎಂ. ಬಿಲ್ಲವ, ಜತೆ ಕಾರ್ಯದರ್ಶಿಗಳಾದ ರಂಗ ಎಸ್‌. ಪೂಜಾರಿ, ಸುಶೀಲಾ ಆರ್‌. ಪೂಜಾರಿ, ಜತೆ ಕೋಶಾಧಿಕಾರಿಗಳಾದ ಶ್ರೀಧರ ವಿ. ಪೂಜಾರಿ, ರಮೇಶ್‌ ಜಿ. ಬಿಲ್ಲವ, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಬೇಬಿ ಆರ್‌. ಪೂಜಾರಿ, ಕಾರ್ಯದರ್ಶಿ ಯಶೋದಾ ಎಸ್‌. ಪೂಜಾರಿ, ಯುವ ಅಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್‌ ಪೂಜಾರಿ ಕೊಡೇರಿ, ಕಾರ್ಯದರ್ಶಿ ಜಯಶ್ರೀ ಎ. ಕೋಡಿ, ಧಾರ್ಮಿಕ ಮತ್ತು ಸಾಮಾಜಿಕ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್‌ ಎನ್‌. ಪೂಜಾರಿ, ಕಾರ್ಯದರ್ಶಿ ಅಶೋಕ್‌ ಎಂ. ಪೂಜಾರಿ, ಭಜನ ಮಂಡಳಿಯ ಸಂಚಾಲಕಿ ಸುಶೀಲಾ ಎಸ್‌. ಪೂಜಾರಿ, ಆಡಳಿತ ಮಂಡಳಿ, ಉಪಸಮಿತಿಗಳ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

 ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.