ಡೊಂಬಿವಲಿ ಶ್ರೀ ರಾಧಾಕೃಷ್ಣ  ಶ್ರೀ ಶನೀಶ್ವರ ಮಂದಿರ: ಧಾರ್ಮಿಕ ಸಭೆ

Team Udayavani, Nov 17, 2018, 4:25 PM IST

1611mum10.jpg

ಡೊಂಬಿವಲಿ: ನಾನು ಕಷ್ಟದಲ್ಲಿರುವಾಗ ಈ ಸ್ಥಳದಲ್ಲಿ ಬಂದು ಪ್ರಾರ್ಥಿಸಿ ನನ್ನ ಕಷ್ಟ ಗಳನ್ನು ಪರಿಹರಿಸಿಕೊಂಡಿದ್ದೇನೆ. ಉದ್ಯಮವನ್ನು ಪ್ರಾರಂಭಿಸುವಾಗ ತಾಯಿಯ ಪ್ರೇರಣೆಯಂತೆ ಇಲ್ಲಿ ಪ್ರಾರ್ಥಿಸಿದ ಅನಂತರ ಉದ್ಯಮದಲ್ಲಿ ಯಶಸ್ಸನ್ನು ಕಂಡಿದ್ದೇನೆ. ನಾವೆಲ್ಲರೂ ಒಂದಾಗಿ ಈ ಮಂದಿರವನ್ನು ಭವ್ಯ ದೇವಸ್ಥಾನವನ್ನಾಗಿಸೋಣ ಎಂದು ಉದ್ಯಮಿ ದಿನೇಶ್‌ ಕೋಟ್ಯಾನ್‌ ನುಡಿದರು.

ಡೊಂಬಿವಲಿ ಪಶ್ಚಿಮದ ಶ್ರೀ ರಾಧಾಕೃಷ್ಣ ಭಜನಾ ಮಂಡಳಿಯ ಸಂಚಾಲಕತ್ವದ ಶ್ರೀ ರಾಧಾಕೃಷ್ಣ ಶ್ರೀ ಶನೀಶ್ವರ ಮಂದಿರದ 60 ನೇ ವಾರ್ಷಿಕ ಮಂಗಳ್ಳೋತ್ಸವ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಮಂದಿರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ವಾಗಿದೆ. ಎಲ್ಲರು ಒಗ್ಗಟ್ಟಿನಿಂದ ಮಂದಿರವನ್ನು ನಿರ್ಮಿಸೋಣ. ಅದಕ್ಕಾಗಿ ತುಳು-ಕನ್ನಡಿಗರು ಕಟಿ ಬದ್ಧರಾಗೋಣ ಎಂದರು.

ವಜ್ರ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಜಾತಿ, ಮತ, ಭೇದವನ್ನು ಮರೆತು ಕಳೆದ ಎರಡು ದಿನಗಳಿಂದ ಎಲ್ಲ ಸದಸ್ಯರು ಅದರೊಂದಿಗೆ ವಿಶೇಷವಾಗಿ ಮಹಿಳಾ ವೃಂದ ಬಹಳಷ್ಟು ಶ್ರಮವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದೆ. ನಾವೆಲ್ಲರೂ ಒಂದಾಗಿ ಭವ್ಯ ದೇವ ಸ್ಥಾನ ನಿರ್ಮಿಸುವುದರೊಂದಿಗೆ ಡೊಂಬಿವಲಿಯ ಪ್ರಸಿದ್ಧ ಕ್ಷೇತ್ರವನ್ನಾಗಿ ಸೋಣ ಎಂದರು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ ಅವರು ಮಾತನಾಡಿ, ದೇವಸ್ಥಾನ, ಮಠ, ಮಂದಿರ, ಹಿಂದುತ್ವದ ಸಂಕೇತ ವಾಗಿದೆ. ನಮ್ಮ ಹಿರಿಯರು ಹಿಂದು ತ್ವದ ಮೂಲವನ್ನು ಉಳಿಸಲು ಅಂದಿನ ದಿನಗಳಲ್ಲೇ ಅಡಿಪಾಯವನ್ನು ಹಾಕಿದ್ದಾರೆ. ನಮ್ಮ ಉದ್ದೇಶ, ದೇವರ ಅನುಗ್ರಹವಿದ್ದರೆ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯುವುದರಲ್ಲಿ ಸಂಶಯವಿಲ್ಲ ಎಂದು ನುಡಿದರು.

ಬಂಟರ ಸಂಘ ಭಿವಂಡಿ- ಬದ್ಲಾಪುರ ಪ್ರಾದೇಶಿಕ ಸಮಿತಿಯ ಸಂಘಟಕ ಸುಬ್ಬಯ್ಯ ಶೆಟ್ಟಿ ಅವರು ಮಾತನಾಡಿ, ದಿವಾಕರ ಶೆಟ್ಟಿ ಇಂದ್ರಾಳಿಯವರೊಂದಿಗೆ ಮಂದಿರದ ಕೆಲಸದಲ್ಲಿ ನನ್ನನ್ನು ಭಾಗಿಯಾಗಿಸಿದ್ದೀರಿ. ಈ ಕ್ಷೇತ್ರದ ಅಭಿವೃದ್ಧಿಯಲ್ಲಿ ನನ್ನ ಕೊಡುಗೆ ನೀಡಲು  ತಯಾರಿದ್ದೇನೆ. ಡೊಂಬಿವಲಿಯಲ್ಲಿ ರಾಧಾಕೃಷ್ಣ ಶ್ರೀ ಶನಿದೇವರ ಭವ್ಯ ದೇವಸ್ಥಾನದ ನಿರ್ಮಾಣಕ್ಕೆ ತಯಾರಾಗೋಣ ಎಂದು ಹೇಳಿದರು.

ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಆನಂದ ಶೆಟ್ಟಿ ಎಕ್ಕಾರು ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಈ ಸ್ಥಳದಲ್ಲಿ ಉತ್ತಮ ಕಾರ್ಯಕ್ರಮಗಳು ಜರ ಗುತ್ತಿವೆ. ನಿಮ್ಮೆಲ್ಲರ ಸಹಕಾರ ದೇವರ ದಯೆಯಿಂದ ಕಾರ್ಯಕ್ರಮ ಉತ್ತಮವಾಗಿ ಮೂಡಿಬಂದಿದೆ. ತಾಯ್ನಾಡಿನ ಸಂಸ್ಕೃತಿಯನ್ನು ಇಲ್ಲಿ ಕಾಣುವಂತಾಯಿತು ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ರವಿ ಸನಿಲ್‌ ಅವರು ಮಾತನಾಡಿ, ಕ್ಷೇತ್ರದ ಮಹಿಳಾ ವಿಭಾಗದ ಕೆಲಸಗಳು ಅಚ್ಚು ಕಟ್ಟಾಗಿ ನಡೆಯುವುದರಿಂದ ನಮ್ಮ ಕಾರ್ಯಕಲಾಪಗಳು ಸುಸಾಂಗವಾಗಿ ನೆರವೇರುತ್ತಿದೆ. ಕಾರ್ಯಕಾರಿ ಸಮಿ ತಿಯ ಬೆಂಬಲ, ಅರ್ಚಕರ ಪ್ರೋತ್ಸಾಹ ಈ ಸಂಸ್ಥೆಯೊಂದಿಗಿದೆ. ನಾವೆಲ್ಲರೂ ಶೀಘ್ರದಲ್ಲೇ ಭವ್ಯ ದೇವಸ್ಥಾನ  ನಿರ್ಮಿ ಸೋಣ ಎಂದರು.

ಕಾರ್ಯದರ್ಶಿ ಸೋಮನಾಥ ಪೂಜಾರಿ ಸ್ವಾಗತಿಸಿ ಅಧಿಕ ಧನ ಸಂಗ್ರಹಿಸಿದವರ ಯಾದಿ ಓದಿದರು. ಬೆಳಗ್ಗೆ ಶ್ರೀ ಸತ್ಯನಾರಾಯಣ ಮಹಾ ಪೂಜೆ ನಡೆಯಿತು. ಪೂಜಾ ವಿಧಿ- ವಿಧಾನಗಳಲ್ಲಿ ಶೇಖರ್‌ ಭುವಾಜಿ ಸಹಕರಿಸಿದರು. ವಜ್ರ ಮಹೋತ್ಸವದ ಕಾರ್ಯದರ್ಶಿ ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ರವಿ ಸನಿಲ್‌, ರಾಜೀವ ಭಂಡಾರಿ, ರಾಮಣ್ಣ ಶೆಟ್ಟಿ, ರವೀಂದ್ರ ವೈ. ಶೆಟ್ಟಿ, ಹರೀಶ್‌ ಶೆಟ್ಟಿ, ಪ್ರಕಾಶ್‌ ಭಟ್‌, ಆರ್‌. ಬಿ. ಶೆಟ್ಟಿ, ಶೇಖರ್‌ ಭುವಾಜಿ, ಶೇಖರ್‌ ಪುತ್ರನ್‌, ಲಕ್ಷ್ಮಣ್‌ ಸುವರ್ಣ, ಸೋಮನಾಥ ಪೂಜಾರಿ, ವಸಂತ ಸುವರ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.