ಕಾತ್ರಜ್‌ ಶ್ರೀ ಅಯ್ಯಪ್ಪ ದೇವಸ್ಥಾನ: ಮಕರ ಸಂಕ್ರಾಂತಿ

Team Udayavani, Jan 18, 2019, 4:42 PM IST

36.jpg

ಪುಣೆ: ಸಾಂಸ್ಕೃತಿಕ ನಗ ರಿಯ ತುಳು ಕನ್ನಡಿಗರ ಆಸ್ತಿಕ ಭಕ್ತರ ಶ್ರಧಾª ಕೇಂದ್ರವಾದ ಕಾತ್ರಜ್‌ ಸಚ್ಚಾಯಿ ಮಾತಾ ನಗರದ ಶ್ರೀ  ಅಯ್ಯಪ್ಪ ಸ್ವಾಮೀ ದೇವಸ್ಥಾನದ ಸನ್ನಿಧಾನದಲ್ಲಿ   ಮಕರ ಸಂಕ್ರಾಂತಿ ಉತ್ಸವವು ಜ. 14ರಂದು ಸಂಜೆ ಅಪರಾಹ್ನ  4ರಿಂದ  ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಮಕರ ಸಂಕ್ರಮಣದ ಈ ಶುಭ ದಿನದಂದು ಪುಣೆ ಕಾತ್ರಜ್‌ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿ ವರ್ಷವೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.  ದೇವಸ್ಥಾನದ   ಪ್ರಧಾನ ಅರ್ಚಕ ರಾದ  ವೇದಮೂರ್ತಿ ಹರೀಶ ಭಟ್‌ ಅವರ ನೇತೃತ್ವದಲ್ಲಿ ಕ್ಷೇತ್ರದ ಆರಾಧ್ಯ ದೇವರಾದ  ಶ್ರೀ ಅಯ್ಯಪ್ಪ ಸ್ವಾಮಿಗೆ ಹಾಗೂ ಪರಿವಾರ ದೇವರಿಗೆ  ವಿಶೇಷ ಪೂಜೆ  ಮತ್ತು ಮಹಾಪೂಜೆ, ಮಂಗಳಾರತಿ ಜರಗಿತು.

ಇರುಮುಡಿ ಕಟ್ಟಿ ಶಬರಿಮಲೆ ಯಾತ್ರೆ ಕೈಗೊಂಡ  ಶೇಖರ್‌ ಗುರು ಸ್ವಾಮಿ ಅವರ ನೇತೃತ್ವದಲ್ಲಿ ಪಡಿಪೂಜೆ ಜರಗಿತು. ಮಹಿಳಾ  ವಿಭಾಗದವರಿಂದ ಮಕರ ಸಂಕ್ರಮಣದ ಪರ್ವ ಕಾಲದಲ್ಲಿ ಪ್ರತಿ ವರ್ಷ  ನಡೆಸಿಕೊಂಡು ಬಂದಿರುವ ಅರಸಿನ ಕುಂಕುಮ   ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು .  ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಕ್ತ ವೃಂದದವರಿಂದ ಭಜನೆ, ಶ್ರೀಮತಿ  ಜಶ್ವಿ‌ತಾ  ಕೃಷ್ಣ ಇವರಿಂದ ಭರತನಾಟ್ಯ  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಸಂಜೆ  6.45 ರಿಂದ ಶ್ರೀ ಕ್ಷೇತ್ರ ಶಬರಿಮಲೆಯ ಜ್ಯೋತಿ ದರ್ಶನದ ನೇರ ಪ್ರಸಾರವನ್ನು ದೇವಸ್ಥಾನದಲ್ಲಿ ಹಾಕಲಾದ ವಿಶಾಲ ಪರದೆಯಲ್ಲಿ ಸೇರಿದ ನೂರಾರು ಸಂಖ್ಯೆಯ ಅಯ್ಯಪ್ಪ ಭಕ್ತರು ನೋಡಿ ಕಣ್ತುಂಬಿಸಿಕೊಂಡರು.

ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ವೇದಘೋಷರಿದೊಂದಿಗೆ ಜ್ಯೋತಿಯನ್ನು ಕಂಡು ಪುನೀತ ರಾದರು. ಇದೆ ಸಂದರ್ಭದಲ್ಲಿ ಶಬರಿಮಲೆಗೆ  10ರಿಂದ 50ರ ವರೆಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕೊಡಬೇಕೆಂಬ ನಿರ್ಣಯದ ವಿರುದ್ದ ಪಂದಳ ರಾಜರ ಆದೇಶದಂತೆ ಧರ್ಮ ಫೌಂಡೇಶನ್‌ ದೇಶಾದ್ಯಂತ  ಹಮ್ಮಿ ಕೊಂಡಿದ್ದ  ಧರ್ಮರûಾ ಜ್ವಾಲ ಜ್ಯೋತಿಯನ್ನು ಕ್ಷೇತ್ರದಲ್ಲಿ ಸೇರಿದ ಅಸಂಖ್ಯಾತ ಭಕ್ತರು ಬೆಳಗಿಸಿದರು.

ಪೂಜಾ ಕಾರ್ಯಕ್ರಮದ ಅನಂತರ  ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು. ಅನ್ನಸಂತರ್ಪಣೆಯು  ಪ್ರಶಾಂತ್‌ ಆಳ್ವ ಮತ್ತು ಪ್ರವೀಣ್‌ ಆಳ್ವರ ಪ್ರಾಯೋಜಕತ್ವದಲ್ಲಿ ನಡೆಯಿತು.  ಈ ಪುಣ್ಯ  ಕಾರ್ಯದಲ್ಲಿ  ಪುಣೆಯ ತುಳು ಕನ್ನಡಿಗರು, ಅಯ್ಯಪ್ಪ ಸ್ವಾಮಿ ಭಕ್ತರು, ಮಹಿಳೆಯರು, ಮಕ್ಕಳು ಭಾಗವಹಿಸಿ ಗಂಧ ಪ್ರಸಾದ ಸ್ವೀಕರಿಸಿ  ಶ್ರೀ ಅಯ್ಯಪ್ಪ ಸ್ವಾಮೀ ಕೃಪೆಗೆ ಪಾತ್ರರಾದರು.  ಕ್ಷೇತ್ರ ದಲ್ಲಿ ಇರುಮುಡಿ ಕಟ್ಟಿದ ಸ್ವಾಮಿಗಳು ಶಬರಿಮಲೆ ಯಾತ್ರೆ ಕೈಗೊಂಡರು.

ವಿವಿಧ ಸಂಘ ಸಂಸ್ಥೆಗಳ  ಅಧ್ಯಕ್ಷರು,  ಪದಾಧಿಕಾರಿಗಳು ಈ ಕಾರ್ಯ ಕ್ರಮದಲ್ಲಿ  ಪಾಲ್ಗೊಂಡಿದ್ದರು. ಗಣ್ಯರನ್ನು ವಿಶ್ವಸ್ತ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಗೌರವಿಸಿದರು.

ಶ್ರೀ  ಅಯ್ಯಪ್ಪ ಸ್ವಾಮೀ ದೇವಸ್ಥಾನ ಕಾತ್ರಜ್‌ನ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ವಿಶ್ವಸ್ತ ಮಂಡಳಿಯ ಅಧ್ಯಕ್ಷರಾದ ಸುಭಾಶ್‌ ಶೆಟ್ಟಿ ಮತ್ತು ಪದಾಧಿಕಾರಿಗಳು ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘ ಮಹಿಳಾ ಮಂಡಳಿಯ ಅಧ್ಯಕ್ಷೆ ಮತ್ತು ಪದಾಧಿಕಾರಿಗಳು, ಸರ್ವ ಭಕ್ತರ ಸಹಕಾರದೊಂದಿಗೆ  ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗಿದವು.  

 ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.