CONNECT WITH US  

ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್‌:ವಾರ್ಷಿಕೋತ್ಸವ ಸಂಭ್ರಮಕ್ಕೆ  ಚಾಲನೆ

ಪುಣೆ: ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ 24ನೇ ವಾರ್ಷಿ ಕೋತ್ಸವ ಸಮಾರಂಭವು ಫೆ. 9 ರಂದು  ಚಿಂಚ್ವಾಡ್‌ ಅನ್ನಪೂರ್ಣಾ ಹೊಟೇಲ್‌ ಸಮೀಪದ ರಾಮಕೃಷ್ಣ ಮೋರೆ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷರಾದ ವಿಜಯ್‌ ಎಸ್‌. ಶೆಟ್ಟಿ ಕಟ್ಟಣಿಗೆ ಮನೆ ಬೋರ್ಕಟ್ಟೆ ಇವರ  ಅಧ್ಯಕ್ಷತೆಯಲ್ಲಿ  ನಡೆದ ಸಭಾ ಕಾರ್ಯಕ್ರಮಕ್ಕೆ  ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭವಾನಿ ಫೌಂಡೇಶನ್‌ ಮುಂಬಯಿ ಇದರ ಸ್ಥಾಪಕಾಧ್ಯಕ್ಷರಾದ ಕುಸುಮೋಧರ ಡಿ. ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಮುಂಬಯಿಯ ಕವಿ ಹಾಗೂ ಲೇಖಕ ಪೇತ್ರಿ ವಿಶ್ವನಾಥ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ವಿ. ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು  ಇವರುಗಳು ದೀಪ ಪ್ರಜ್ವಲಿಸಿ ಚಾಲನೆಯಿತ್ತರು.
ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್‌ ಸೀತರಾಮ ಶೆಟ್ಟಿ, ಎರ್ಮಾಳ್‌ ನಾರಾಯಣ ಕೆ.  ಶೆಟ್ಟಿ, ಎರ್ಮಾಳ್‌  ವಿಶ್ವನಾಥ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಹೆಗ್ಡೆ ಕಟ್ಟಿಂಗೇರಿಮನೆ, ಪ್ರಧಾನ ಕಾರ್ಯ ದರ್ಶಿ ಅರುಣ್‌  ಶೆಟ್ಟಿ ವಿಜಯಾ ಬ್ಯಾಂಕ್‌, ಉಪಾಧ್ಯಕ್ಷ ರಾಕೇಶ್‌ ಶೆಟ್ಟಿ ಬೆಳ್ಳಾರೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಧ್ಯಕ್ಷ ವಿಶ್ವನಾಥ ಕೆ. ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಉಜಿರೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಡಾ|  ಸಮಿತ್‌ ಚೌಟ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ.  ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್‌ ಜೆ. ಶೆಟ್ಟಿ ಹಾಗೂ ಪದಾಧಿಕಾರಿಗಳು  ಉಪಸ್ಥಿತರಿದ್ದರು. 
ಚಿತ್ರ,ವರದಿ :ಕಿರಣ್‌ ಬಿ. ರೈ ಕರ್ನೂರು


Trending videos

Back to Top