ಸೆಂಟ್ರಲ್‌ ರೈಲ್ವೇ ತಂಡಕ್ಕೆ ಪ್ರಶಸ್ತಿ


Team Udayavani, Feb 12, 2019, 4:23 PM IST

1002mum05.jpg

ಮುಂಬಯಿ: ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಆಶ್ರಯದಲ್ಲಿ ಕೆಎಸ್‌ಎ ಕಾರ್ಯಕಾರಿ ಸಮಿತಿಯ ಸದಸ್ಯ ದಿ| ವಿಶ್ವನಾಥ ಅಂಚನ್‌ ಅವರ ಸಹೋದರ ರವಿ ಅಂಚನ್‌ ಪ್ರಾಯೋಜಿದ ದ್ವಿತೀಯ ವರ್ಷದ ವಿಶ್ವನಾಥ್‌ ಅಂಚನ್‌ ಸ್ಮಾರಕ ಹಿರಿಯ ಫುಟ್ಬಾಲ್‌ ಪಂದ್ಯಾಟದಲ್ಲಿ ಸೆಂಟ್ರಲ್‌ ರೈಲ್ವೇ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಫೆ. 9 ರಂದು ಸಂಜೆ ಚರ್ಚ್‌ಗೇಟ್‌ ಪರಿಸರದ ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಸೆಂಟ್ರಲ್‌ ರೈಲ್ವೇ ತಂಡವು ಬಾಂದ್ರಾ ಪ್ಯಾಕರ್ ತಂಡದೊಂದಿಗೆ ಸೆಣಸಾಡಿದ್ದು. ಸೆಂಟ್ರಲ್‌ ರೈಲ್ವೇ ತಂಡವು 3-0 ಅಂತರಗಳಿಂದ ಗೆದ್ದು ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ವಿಜೇತ ತಂಡದ ಪರವಾಗಿ ಕಾಸಿಪ್‌ ಜಮಾಲ್‌, ಅರಿಫ್‌ ಅನ್ಸಾರಿ ಹಾಗೂ ಅಮರ್‌ ಪರದೇಶಿ ಅವರು ತಲಾ ಒಂದು ಗೋಲು ಹೊಡೆದು ತಂಡಕ್ಕೆ ಜಯ ತಂದುಕೊಟ್ಟರು.
ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಕೆಎಸ್‌ಎ ತಂಡವು ಏರ್‌ ಇಂಡಿಯಾ ತಂಡವನ್ನು 1-0 ಅಂತರದಿಂದ ಬಗ್ಗುಬಡಿಯಿತು. ಕೆಎಸ್‌ಎ ತಂಡದ ಪರವಾಗಿ ವೆಲ್ವಿನ್‌ ವಾಜ್‌ ಗೋಲು ಹೊಡೆದರು. ವಿಶೇಷ ವೈಯಕ್ತಿಕ ಬಹುಮಾನವನ್ನು ಶ್ಯಾಮ್‌ ಸಾವಂತ್‌ ಗೋಲ್‌ ಕೀಪರ್‌, ತಬರೇಜ್‌ ಸಯ್ನಾದ್‌ ಡಿಫೆಂಡರ್‌, ಸವಿಯೋ ರೊಡ್ರಿಗಸ್‌ ಮಿಡ್‌ ಫೀಲ್ಡ್‌, ಮೆಲ್ವಿನ್‌ ವಾಜ್‌ ಸೆಂಟರ್‌ ಫಾರ್‌ವರ್ಡ್‌ ಹಾಗೂ ಪಂದ್ಯಾಟದ ಸರ್ವೋತ್ತಮ ಆಟಗಾರರಾಗಿ ಸೆಂಟ್ರಲ್‌ ರೈಲ್ವೆಯ ಕಾಸಿಫ್‌ ಜಮಾಲ್‌ ಅವರು ಪಡೆದರು.
ವಿಜೇತ ತಂಡಕ್ಕೆ 50 ಸಾವಿರ ರೂ. ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 35 ಸಾವಿರ ರೂ. ನಗದು ಮತ್ತು ಟ್ರೋಫಿ ಹಾಗೂ ಮೂರನೇ ಸ್ಥಾನ ಪಡೆದ ತಂಡಕ್ಕೆ 15 ಸಾವಿರ ರೂ. ನಗದು ಮತ್ತು ಟ್ರೋಫಿ, ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ನಗದು ಮತ್ತು ಟ್ರೋಫಿಯನ್ನು ಗಣ್ಯರು ಪ್ರದಾನಿಸಿ ಗೌರವಿಸಿದರು. ರಾಷ್ಟ್ರೀಯ ಫುಟ್ಬಾಲ್‌ ಆಟಗಾರ, ಟಾಟಾ ಉದ್ಯೋಗ ಸಮೂಹದ ಸುರೇಂದ್ರ ಕುಮಾರ್‌ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿಜೇತರನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಪಂದ್ಯಾಟದ ಆಯೋಜಕರಾದ ರವಿ ಅಂಚನ್‌, ಕರ್ನಾಟಕ ನ್ಪೋರ್ಟಿಂಗ್‌ ಅಸೋಸಿಯೇಶನ್‌ ಪದಾಧಿಕಾರಿಗಳಾದ ಜಯ ಎ. ಶೆಟ್ಟಿ, ಎಂ. ಪಿ. ಶೆಟ್ಟಿ, ಕೃಷ್ಣ ಶೆಟ್ಟಿ, ಸಾಲ್ಪಡೋರ್‌ ಡಿಸೋಜಾ, ಜಯಂತ್‌ ಕುಂದರ್‌, ಸುಕುಮಾರ್‌ ಹತ್ತಂಗಡಿ, ಸುರೇಂದ್ರ ಕರ್ಕೇರ, ಪ್ರೇಮನಾಥ್‌ ಪುತ್ರನ್‌, ಸದಾ ಉಚ್ಚಿಲ್‌, ದಯಾ ಅಂಚನ್‌, ಅಶೋಕ್‌ ಶೆಟ್ಟಿ, ಹಿರಿಯ ಆಟಗಾರ ಶೇಖರ್‌ ಬಂಗೇರ, ಹರೀಶ್‌ ಶೆಟ್ಟಿ, ಚೇರೊಮ ಉಪಸ್ಥಿತರಿದ್ದು ಸಹಕರಿಸಿದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.