ನೆಲ್ಯಾಡಿಯಲ್ಲಿ ಪೋಡಿ ಮುಕ್ತ  ಗ್ರಾಮ ಅಭಿಯಾನ 

Team Udayavani, Nov 20, 2017, 4:52 PM IST

20-Nov-16.jpg

ನೆಲ್ಯಾಡಿ: ಸರಕಾರದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಸೂಚಿಯಾದ ‘ಪೋಡಿ ಮುಕ್ತ ಗ್ರಾಮ ಅಭಿಯಾನ’ವು ನೆಲ್ಯಾಡಿಯ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ನೆಲ್ಯಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸರಕಾರವು ಗ್ರಾಮೀಣ ಪ್ರದೇಶದ ಪಟ್ಟಾದಾರರಿಗೆ ಬಹುಕಾಲದಿಂದ ಕಂದಾಯ ದಾಖಲೆಯಲ್ಲಿರುವ ಲೋಪ ದೋಷಗಳನ್ನು ಗ್ರಾಮ ಪಂಚಾಯತ್‌ ಮಟ್ಟದಲ್ಲಿಯೇ ಸರಿಪಡಿಸಿ ಕೊಳ್ಳಬಹುದಾದ ವ್ಯವಸ್ಥೆಯನ್ನು ಈ ಪೋಡಿ ಮುಕ್ತ ಗ್ರಾಮ ಅನ್ನುವ ಕಾರ್ಯಸೂಚಿಯ ಮೂಲಕ ಸರಳೀಕರಣಗೊಳಿಸಿದೆ. ಇದರ ಉಪಯೋಗವನ್ನು ಗ್ರಾಮದ ಎಲ್ಲ ಜನರು ಪಡಕೊಳ್ಳುವಂತಾಗಲೀ ಎಂದರು.

ಪುತ್ತೂರು ತಾ| ಸರ್ವೇ ಇಲಾಖೆಯ ಎಡಿಎಲ್‌ಆರ್‌ ಭೈರಪ್ಪ ಮಾತನಾಡಿ, ಪೂರ್ವ ನಿಗದಿಯಂತೆ ಇಂದಿನಿಂದ ನೆಲ್ಯಾಡಿ ಗ್ರಾಮದಲ್ಲಿ ಪೋಡಿ ಮುಕ್ತ ಅಭಿಯಾನ ಆರಂಭಿಸುತ್ತಿದ್ದೇವೆ. ಇಂದು ಮಾಹಿತಿಯನ್ನು ಪಡಕೊಳ್ಳದ ಗ್ರಾಮಸ್ಥರು ಬಹುತೇಕ ಇದ್ದರೂ ಅವರು ತಮ್ಮ ಸಮಸ್ಯೆಗಳನ್ನು ಗ್ರಾ. ಪಂ. ಕಚೇರಿಗೆ ಬಂದು ತಿಳಿಸಿದಲ್ಲಿ ಇದನ್ನು ಸರಿಪಡಿಸಿಕೊಡಲಾಗುವುದು ಎಂದರು. ಸರ್ವೆ ಇಲಾಖೆಯ ಸೂಪರ್‌ವೈಸರ್‌ ಸಿ.ಕೆ. ಮಂಜುನಾಥ್‌, ನೆಲ್ಯಾಡಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ದೇವರಾಜ್‌, ಸರ್ವೇಯರ್‌ ಉದಯ ಕುಮಾರ್‌, ನೆಲ್ಯಾಡಿ ಗ್ರಾಮಕರಣಿಕೆ ಅಶ್ವಿ‌ನಿ ಮೊದಲಾದವರು ಉಪಸ್ಥಿತರಿದ್ದರು. 

ಮಹತ್ವಾಕಾಂಕ್ಷಿ ಯೋಜನೆ
ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪೋಡಿ ಮುಕ್ತ ಗ್ರಾಮ. ಇದರ ಮಾಹಿತಿಯನ್ನು ಸಂಬಂಧ ಪಟ್ಟ ಇಲಾಖೆ ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವ ಕಾರ್ಯ ಇನ್ನೂ ಸಮರೋಪಾದಿಯಲ್ಲಿ ನಡೆಯಬೇಕಾಗಿದೆ. ಪಟ್ಟಾದಾರರ ಹಳೆಯ ಕಂದಾಯ ಸಮಸ್ಯೆಗಳಾದ ಗಡಿ ಗುರುತು ತಕರಾರು, ಹಿಂದಿನಿಂದಲೂ ಗಡಿಯಲ್ಲಿರುವ ಗೊಂದಲಗಳನ್ನು ಗ್ರಾಮಮಟ್ಟದಲ್ಲಿ ಸ್ವತಃ ಸರ್ವೇ ಇಲಾಖೆಯವರೇ ಬಂದು ಪ್ಲಾಟಿಂಗ್‌ ಮೂಲಕ ಸರಿಪಡಿಸಲು ಇರುವ ಅತೀ ಅಗತ್ಯದ ಯೋಜನೆಯಾಗಿದೆ ಎಂದು ತಾಲೂಕು ಪಂಚಾಯತ್‌ ಸದಸ್ಯೆ ಉಷಾ ಅಂಚನ್‌ ಹೇಳಿದರು.

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.